ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ; ಭೂಕುಸಿತ ಸಾಧ್ಯತೆ, ಹೈ ಅಲರ್ಟ್‌

Cyclone Fengal
Spread the love

ನ್ಯೂಸ್ ಆ್ಯರೋ: ಬಂಗಾಳಕೊಲ್ಲಿಯಲ್ಲಿ ಫೆಂಗಲ್‌ ಚಂಡಮಾರುತ ತೀವ್ರತೆ ಪಡೆದಿದ್ದು, ಶನಿವಾರ (ಇಂದು) ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಮಳೆ ಎದುರಿಸುತ್ತಿರುವ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಜೊತೆಗೆ ರಾಣಿಪೇಟ್, ತಿರುವಣ್ಣಾಮಲೈ, ವೆಲ್ಲೂರು, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಿಣಂ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಅಲ್ಲದೇ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಉಂಟುಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ತಮಿಳುನಾಡು, ಪುದುಚೇರಿಯ ಜೊತೆಗೆ ಆಂಧ್ರದ ನೆಲ್ಲೂರು, ತಿರುಪತಿ, ಚಿತ್ತೂರು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಿಸಿದೆ.

ಈಗಾಗಲೇ ತಮಿಳುನಾಡಿನಲ್ಲಿ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಫೆಂಗಲ್‌ ಚಂಡಮಾರುತವು ಭಾರಿ ಮಳೆ ತರಲಿದ್ದು ಮತ್ತು ಗಂಟೆಗೆ 70 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ರಾಜ್ಯ ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಿದೆ. ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ನಿಯಮ ಜಾರಿಗೊಳಿಸುವಂತೆ ಸೂಚಿಸಿದೆ. ಮಳೆ ಮುನ್ಸೂಚನೆ ಹೊಂದಿರುವ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

Leave a Comment

Leave a Reply

Your email address will not be published. Required fields are marked *

error: Content is protected !!