ಸಾರಿಗೆ ಬಸ್‌ಗೆ ಕಾರು ಡಿಕ್ಕಿ; ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ

Medical Students
Spread the love

ನ್ಯೂಸ್ ಆ್ಯರೋ: ಸಾರಿಗೆ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ.

ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತ ವಿದ್ಯಾರ್ಥಿಗಳು. ಇವರು ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಕರ್ಲಕೋಡ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 10 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಹಾಗೂ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಬಳಿಕ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!