ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಗೌಡ ಎಂಗೇಜ್ಮೆಂಟ್ – ವೈರಲ್ ಆದ ಫೋಟೋದಲ್ಲಿದ್ದಾರೆ ನಿವೃತ್ತ ಸೂಪರ್ ಕಾಪ್..!!

ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಗೌಡ ಎಂಗೇಜ್ಮೆಂಟ್ – ವೈರಲ್ ಆದ ಫೋಟೋದಲ್ಲಿದ್ದಾರೆ ನಿವೃತ್ತ ಸೂಪರ್ ಕಾಪ್..!!

ನ್ಯೂಸ್ ಆ್ಯರೋ : ಕಲರ್ಸ್ ಕನ್ನಡದ ಖ್ಯಾತ ಧಾರಾವಾಹಿ ಅಗ್ನಿಸಾಕ್ಷಿಯ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿರುವ ನಟಿ, ನಿರೂಪಕಿ ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಫೋಟೋ ಶೇರ್ ಮಾಡಿರುವ ವೈಷ್ಣವಿ ಗೌಡ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಬಿಗ್ ಬಾಸ್ ಗೂ ಎಂಟ್ರಿ ಕೊಟ್ಟಿದ್ದ ವೈಷ್ಣವಿ ಮನೆಯವರ ಜೊತೆ ಅನ್ಯೋನ್ಯತೆಯಿಂದ ಆಟವಾಡಿದ್ದರು. ವಿವಾದಗಳಿಗೆ ಒಳಗಾಗದೇ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅಲ್ಲದೆ ದೊಡ್ಮನೆಯಿಂದ ವೈಷ್ಣವಿ ಹೊರ ಬರುತ್ತಿದ್ದಂತೆಯೇ ಅವರ ಮದುವೆ ವಿಚಾರ ಕೂಡ ಮುನ್ನೆಲೆಗೆ ಬಂದಿತ್ತು.

ಈ ಬಗ್ಗೆ ವೈಷ್ಣವಿ ಅವರೇ ಕೆಲ ಕಾರ್ಯಕ್ರಮಗಳಲ್ಲಿ ಮದುವೆ ಆಫರ್ಸ್ ಬರುತ್ತಿವೆ ಎಂದು ಹೇಳಿಕೊಂಡಿದ್ದರು. ಇದೀಗ ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹುಡುಗ ಯಾರು? ಯಾವ ಕ್ಷೇತ್ರದವರು? ನಿಶ್ಚಿತಾರ್ಥ ನಡೆದದ್ದು ಎಲ್ಲಿ ಎನ್ನುವ ವಿಚಾರ ಮಾತ್ರ ಗುಟ್ಟಾಗಿದೆ.

ಆದರೆ ವೈಷ್ಣವಿ ಶೇರ್ ಮಾಡಿರುವ ಫೋಟೋದಲ್ಲಿ ಮಾಜಿ ಪೋಲಿಸ್ ಅಧಿಕಾರಿ ಶಂಕರ್ ಬಿದರಿ ಅವರಿದ್ದು, ಹಲವು ಶಂಕೆ ಮೂಡಿದೆ. ಅಲ್ಲದೇ ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಚಿತಾ ರಾಮ್ ಕೂಡ ತಮ್ಮ‌ ಖಾತೆಯಲ್ಲಿ ಇದೇ ಫೋಟೋ ಶೇರ್ ಮಾಡಿದ್ದು, ಶುಭಾಶಯ ಸಲ್ಲಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *