ಅಂಬಿ ಪುತ್ರನ ಚಿತ್ರದಲ್ಲಿ ಜೊತೆಯಾಗಲಿದ್ದಾರೆ ಸಪ್ತಮಿ ಗೌಡ – ಅಭಿಷೇಕ್ ಅಂಬರೀಶ್ ಜೊತೆ ಎಂಗೇಜ್ ಆಗ್ತೀರೋ‌ ಹುಡುಗಿ ಯಾರ್ ಗೊತ್ತಾ…!?

ನ್ಯೂಸ್ ಆ್ಯರೋ : ಕಾಂತಾರ ಬೆಡಗಿ ಸಪ್ತಮಿ ಗೌಡ ಸದ್ದಿಲ್ಲದೇ ಮತ್ತೊಂದು ಚಿತ್ರದ ನಾಯಕಿ ನಟಿಯಾಗಿ ಆಯ್ಕೆಯಾಗಿದ್ದಾರೆ‌. ಅಭಿಷೇಕ್ ಅಂಬರೀಶ್ ನಟನೆಯ ಕಾಳಿ ಚಿತ್ರದ ನಾಯಕಿ ನಟಿಯಾಗಿ ಸಪ್ತಮಿ ಗೌಡ ಬಣ್ಣ ಹಚ್ಚಲಿದ್ದಾರೆ.

ನವೆಂಬರ್‌ 29ರಂದು ಮಂಗಳವಾರ ಅಭಿಷೇಕ್‌ ಅಂಬರೀಶ್‌ ಅವರು ʻಕಾಳಿʼ ಸಿನಿಮಾದ ಮುಹೂರ್ತ ನೆರವೇರಿಸಿದ್ದಾರೆ. ಪೈಲ್ವಾನ್‌, ಗಜಕೇಸರಿ, ಹೆಬ್ಬುಲಿ ಚಿತ್ರವನ್ನು ನಿರ್ದೇಶಿಸಿದ ಕೃಷ್ಣ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಕಾಳಿ ಸಿನಿಮಾ 1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ ಚಿತ್ರವಾಗಿದೆ. ನಿರ್ದೇಶಕ ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಕಾಳಿ ಚಿತ್ರಕ್ಕೆ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಟಗರು’ ‘ಸಲಗ’ ಮುಂತಾದ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಚರಣ್ ರಾಜ್ ಸಂಗೀತ ನೀಡುತ್ತಿದ್ದಾರೆ. ಈಗಾಗಲೇ ಅಭಿಷೇಕ್‌ ಅವರು ʻಬ್ಯಾಡ್‌ಮ್ಯಾನರ್ಸ್‌ʼ ಸಿನಿಮಾ ಚಿತ್ರೀಕರಣವನ್ನು ಮುಗಿಸಿದ್ದಾರೆ.

ಅವಿವಾ ಬಿದ್ದಪ್ಪ ಜೊತೆ ಅಂಬಿ ಪುತ್ರನ‌ ಮದುವೆ..!!
ಡಿಸೆಂಬರ್‌ 11ಕ್ಕೆ ಅಭಿಷೇಕ್‌ ಅವರ ನಿಶ್ಚಿತಾರ್ಥವಿದೆ ಎನ್ನಲಾಗುತ್ತಿದ್ದು, ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರು ಪುತ್ರಿ ಅವಿವಾ ಬಿದ್ದಪ್ಪ ಜೊತೆ ಎಂಗೇಜ್ ಆಗಲಿದ್ದಾರೆ‌ ಎನ್ನಲಾಗುತ್ತಿದೆ. ಅಲ್ಲದೇ ಸ್ನೇಹಿತೆಯಾಗಿರುವ ಅವಿದಾ ಬಿದ್ದಪ್ಪ ಜೊತೆಗೇ ಅಭಿಷೇಕ್‌ ಅವರು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ, ಈಗಾಗಲೇ ಆಯ್ದ ನಟ ಹಲವು ನಟ, ನಟಿಯರಿಗೆ, ಗಣ್ಯವ್ಯಕ್ತಿಗಳಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *