ಅಲ್ಲು ಅರ್ಜುನ್ಗೆ ಜೈಲುವಾಸ ಖಾಯಂ; ಸಂಚಲನ ಮೂಡಿಸಿದ ಪೊಲೀಸ್ ಅಧಿಕಾರಿ ಹೇಳಿಕೆ
ನ್ಯೂಸ್ ಆ್ಯರೋ: ಪುಷ್ಪ ಮೂವಿಯ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸದ್ಯ ಈ ಸಂಬಂಧ ಹೈದರಾಬಾದ್ನ ಪೊಲೀಸ್ ಅಧಿಕಾರಿ ಸಿಪಿ ಸಿವಿ ಆನಂದ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಸಂಧ್ಯಾ ಥಿಯೇಟರ್ ಬಳಿ ಕಾಲು ತುಳಿತಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದೇವೆ. ನಟ ಅಲ್ಲಿಗೆ ಹೋಗಿದ್ದಕ್ಕೆ ಕಾಲ್ತುಳಿತ ಆಗಿದೆ. ಹೀಗಾಗಿ ಅವರನ್ನು ಅರೆಸ್ಟ್ ಮಾಡಿದ್ದು ಉಸ್ಮಾನಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರಿಂದ ಆರೋಗ್ಯ ಪರಿಶೀಲನೆ ಮಾಡಲಾಗುತ್ತದೆ. ಬಳಿಕ ಅವರನ್ನು ನಾಮಪಲ್ಲಿ ಕೋರ್ಟ್ಗೆ ಹಾಜರು ಪಡಿಸಲಾಗುತ್ತದೆ.
ಕೋರ್ಟ್ ರಿಮ್ಯಾಂಡ್ಗೆ ಕಳುಹಿಸಬಹುದೆಂದು ಈಗಾಗಲೇ ನಮ್ಮ ಅಧಿಕಾರಿಗಳು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ರಿಮ್ಯಾಂಡ್ ರಿಪೋರ್ಟ್ ಅನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ ಅಲ್ಲು ಅರ್ಜುನ್ ಅವರ ಸ್ಟೇಟ್ಮೆಂಟ್ ಅನ್ನು ರೆಕಾರ್ಡ್ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಸಿಪಿ ಸಿವಿ ಆನಂದ್ ತಿಳಿಸಿದ್ದಾರೆ.
ಅಲ್ಲು ಅರ್ಜುನ್ ಕಾಲುತುಳಿತಕ್ಕೆ ಕಾರಣ ಎಂದು ಸಿ.ಪಿ ಆನಂದ್ ನೇರವಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ಹೇಳಿಕೆ ಆಂಧ್ರದಲ್ಲಿ ಸಂಚಲನ ಮೂಡಿಸಿದೆ. ಆ ಮೂಲಕ ಅಲ್ಲು ಅರ್ಜುನ್ ಗೆ ಸ್ಟೇಷನ್ ಬೇಲ್ ನೀಡುವುದಿಲ್ಲ ಬದಲಿಗೆ ನ್ಯಾಯಾಂಗ ಬಂಧನಕ್ಕೆ ನೀಡುವುದನ್ನು ಪೊಲೀಸರು ಖಾತ್ರಿಪಡಿಸಿದ್ದಾರೆ. ಅಲ್ಲು ಅರ್ಜುನ್ ಅನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದಲ್ಲಿ ಕನಿಷ್ಟ 14 ದಿನಗಳ ಕಾಲ ಅವರು ಜೈಲು ವಾಸ ಅನುಭವಿಸಬೇಕಿರುತ್ತದೆ. ಆ ಬಳಿಕ ಜಾಮೀನಿಗೆ ಅವರು ಪ್ರಯತ್ನಿಸಬಹುದಾಗಿರುತ್ತದೆ. ಕೆಲವು ಪ್ರಕರಣದಲ್ಲಿ ಮೊದಲ ದಿನವೇ ಜಾಮೀನು ದೊರೆಯುವ ಸಾಧ್ಯತೆಯೂ ಇರುತ್ತದೆ.
Leave a Comment