ಭಾರತೀಯ ರೈಲ್ವೆ ಇಲಾಖೆಯಲ್ಲಿ 2521 ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC ಪಾಸಾದವರು ಅರ್ಜಿ ಸಲ್ಲಿಸಬಹುದು : ವಿವರಗಳು ಇಲ್ಲಿ

ಭಾರತೀಯ ರೈಲ್ವೆ ಇಲಾಖೆಯಲ್ಲಿ 2521 ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC ಪಾಸಾದವರು ಅರ್ಜಿ ಸಲ್ಲಿಸಬಹುದು : ವಿವರಗಳು ಇಲ್ಲಿ

ನ್ಯೂಸ್ ಆ್ಯರೋ : ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೇ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 2521
  • JBP ವಿಭಾಗ- 884 ಹುದ್ದೆಗಳು
  • BPL ವಿಭಾಗ- 614 ಹುದ್ದೆಗಳು
  • ಕೋಟಾ ವಿಭಾಗ- 685
  • WRS ಕೋಟಾ-160 ಹುದ್ದೆಗಳು
  • CRWS BPL- 158 ಹುದ್ದೆಗಳು
  • HQ JBP- 20 ಹುದ್ದೆಗಳು

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆ ಅಥವಾ ಅದರ ಸಮಾನ ಪರೀಕ್ಷೆಯಲ್ಲಿ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. ಇದರೊಂದಿಗೆ, NCVT/SCVT ನೀಡಿದ ಅಧಿಸೂಚಿತ ವಿಷಯದಲ್ಲಿ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳು ಅಥವಾ ಅದರ ಸಮಾನ ಪರೀಕ್ಷೆ ಮತ್ತು ITI/ಟ್ರೇಡ್ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗೆ ಹಾಜರಾಗಬೇಕಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 17, 2022

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಮಾಡಿ

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *