ಕರ್ನಾಟಕದಲ್ಲಿ ಇದೇ ಮೊದಲು; ಬಳ್ಳಾರಿ ವಿವಿಯ ಪ್ರಾಧ್ಯಾಪಕಿಯಾಗಿ ಮಂಗಳಮುಖಿ ನೇಮಕ
ನ್ಯೂಸ್ ಆ್ಯರೋ: ತೃತೀಯ ಲಿಂಗಿಯೊಬ್ಬರು ಬಳ್ಳಾರಿ ವಿಶ್ವವಿದ್ಯಾಲಯದ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೇಣುಕಾ ಪೂಜಾರಿ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಂಗಳಮುಖಿಯೊಬ್ಬರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು. ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಮೂವರು ಮಂಗಳಮುಖಿಯರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದರಾದರೂ ಉನ್ನತ ಶಿಕ್ಷಣ ಪಡೆದು ಪ್ರಾಧ್ಯಾಪಕಿಯಾಗಿದ್ದು ಇದೇ ಪ್ರಥಮ.
ರೇಣುಕಾ ಪೂಜಾರಿ ಅವರು ಮೂಲತಃ ಬಳ್ಳಾರಿ ಜಿಲ್ಲೆ ಕುರುಗೋಡು ಪಟ್ಟಣದವರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪೂರ್ಣಗೊಳಿಸಿ, ಪದವಿ ಪೂರ್ವ ಶಿಕ್ಷಣವನ್ನು ಬಳ್ಳಾರಿಯ ಸರ್ಕಾರಿ ಪದವಿ ಪೂರ್ವ (ಮುನ್ಸಿಪಲ್) ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ. ಪದವಿ ಶಿಕ್ಷಣವನ್ನು ಕುರುಗೋಡಿನಲ್ಲಿ ಹಾಗೂ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಅಭ್ಯಾಸ ಮಾಡಿದ್ದಾರೆ.
ಪ್ರಾಥಮಿಕ ಶಿಕ್ಷಣದಿಂದ ಸ್ನಾತಕೋತ್ತರ ಪದವಿವರೆಗೆ ರೆಗ್ಯುಲರ್ ಆಗಿದ್ದು, ವಿದ್ಯಾರ್ಥಿಯಾಗಿರುವ ವೇಳೆ ದೇಹದಲ್ಲಿ ನೈಸರ್ಗಿಕ ಬದಲಾವಣೆ ಆದ ಹಿನ್ನೆಲೆಯಲ್ಲಿ ಮಂಗಳಮುಖಿಯಾಗಿ ಬದಲಾಗಿದ್ದಾರೆ. ಎಸ್‌ಎಸ್ ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.70ರಷ್ಟು ಅಂಕಗಳನ್ನು ಪಡೆದಿದ್ದಾರೆ.
Leave a Comment