ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ; ಕಾರಣವೇನು ಗೊತ್ತೇ ?

Robin Uthappa
Spread the love

ನ್ಯೂಸ್ ಆ್ಯರೋ: ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಬಿನ್ ಉತ್ತಪ್ಪ ಒಡೆತನದ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಈ ಹಿನ್ನಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಇದೀಗ ರಾಬಿನ್ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ.

ಸದ್ಯ ರಾಬಿನ್ ಉತ್ತಪ್ಪ ಭಾರತವನ್ನು ತೊರೆದು ದುಬೈನಲ್ಲಿ ನೆಲೆಸಿದ್ದಾರೆ. ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿರುವ ಕಾರಣ ಬೆಂಗಳೂರಿಗೆ ಬರುವ ಸಾಧ್ಯತೆಯಿದೆ.

Leave a Comment

Leave a Reply

Your email address will not be published. Required fields are marked *

error: Content is protected !!