ಅಭಿಮಾನದಿಂದ ಪ್ರೀತಿಯನ್ನು ತೋರಿ, ದ್ವೇಷ ಅಗೌರವವನ್ನಲ್ಲ – ನಟ ದರ್ಶನ್ ಮೇಲಿನ ಕೃತ್ಯ ಮನಸ್ಸಿಗೆ ನೋವಾಗಿದೆ ಎಂದ ಶಿವರಾಜ್ ಕುಮಾರ್

ಅಭಿಮಾನದಿಂದ ಪ್ರೀತಿಯನ್ನು ತೋರಿ, ದ್ವೇಷ ಅಗೌರವವನ್ನಲ್ಲ – ನಟ ದರ್ಶನ್ ಮೇಲಿನ ಕೃತ್ಯ ಮನಸ್ಸಿಗೆ ನೋವಾಗಿದೆ ಎಂದ ಶಿವರಾಜ್ ಕುಮಾರ್

ನ್ಯೂಸ್ ಆ್ಯರೋ : ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ಮನಸ್ಸಿಗೆ ನೋವುಂಟು ಮಾಡಿದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ನಟ ಶಿವರಾಜ್ ಕುಮಾರ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಭಾನುವಾರ ನಡೆದ ಕ್ರಾಂತಿ ಸಿನಿಮಾದ ಹಾಡು ಬಿಡುಗಡೆ ಸಮಾರಂಭದಲ್ಲಿ ನಟಿ ರಚಿತಾ ರಾಮ್ ಮಾತನಾಡುವಾಗ ಅವರ ಬಳಿ ನಿಂತಿದ್ದ‌ ನಟ ದರ್ಶನ್ ಮೇಲೆ ವ್ಯಕ್ತಿಯೊಬ್ಬ ಚಪ್ಪಲಿ ಎಸೆದಿದ್ದಾನೆ.

ಈ ಘಟನೆಯನ್ನು ಕನ್ನಡ ಚಿತ್ರರಂಗದ ನಟ– ನಟಿಯರು ಖಂಡಿಸಿದ್ದರು. ನಟರಾದ ಪ್ರೇಮ್, ಶರಣ್, ಲೂಸ್ ಮಾದ ಯೋಗಿ, ಅಭಿಷೇಕ್ ಅಂಬರೀಶ, ಪ್ರಜ್ವಲ್ ದೇವರಾಜ್, ನಟಿ ಅಮೂಲ್ಯ ಸೇರಿದಂತೆ ಸಾಕಷ್ಟು ನಟ ನಟಿಯರು ಈ ಘಟನೆಯನ್ನು ಖಂಡಿಸಿದ್ದರು.

ಈ ಸಂಬಂಧ ಟ್ವೀಟ್ ಮಾಡಿದ ನಟ ಶಿವರಾಜ್‌ಕುಮಾರ್, ‘ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ, ದ್ವೇಷ ಅಗೌರವವನ್ನಲ್ಲ’ ಎಂದು ನಟ ಶಿವರಾಜ್‌ಕುಮಾರ್‌ ಟ್ವೀಟ್‌ ಮಾಡಿ ವಿನಂತಿಸಿಕೊಂಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *