PLATINA 110 ABS : ಬಜೆಟ್ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಸ ಬಜಾಜ್ ಬೈಕ್ – ಪ್ಲಾಟಿನಾ 110 ಎಬಿಎಸ್ ಫೀಚರ್ಸ್ ಹೇಗಿದೆ? ಇದರ ಬೆಲೆ ಎಷ್ಟು ಗೊತ್ತಾ‌‌‌..!?

PLATINA 110 ABS : ಬಜೆಟ್ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಸ ಬಜಾಜ್ ಬೈಕ್ – ಪ್ಲಾಟಿನಾ 110 ಎಬಿಎಸ್ ಫೀಚರ್ಸ್ ಹೇಗಿದೆ? ಇದರ ಬೆಲೆ ಎಷ್ಟು ಗೊತ್ತಾ‌‌‌..!?

ನ್ಯೂಸ್ ಆ್ಯರೋ : ದೇಶೀಯ ಮಾರುಕಟ್ಟೆಯಲ್ಲಿ ತನ್ನದೇ ಮೌಲ್ಯ ಹೊಂದಿರುವ ಬಜಾಜ್ ಆಟೋ ಕಂಪನಿಯು ತನ್ನ ಹೊಸ ಪ್ಲಾಟಿನಾ 110 ಎಬಿಎಸ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಬೈಕ್ ಆವೃತ್ತಿಯು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

ದ್ವಿಚಕ್ರ ವಾಹನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಬಜಾಜ್ ಆಟೋ ಕಂಪನಿಯು ತನ್ನ ಹೊಸ ಪ್ಲಾಟಿನಾ 110 ಎಬಿಎಸ್(Platina 110 ABS) ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ.72,224 ಬೆಲೆ ಹೊಂದಿದೆ.

ಹೊಸ ಬೈಕ್ ಮಾದರಿಯು 110 ಸಿಸಿ ವಿಭಾಗದಲ್ಲಿ ಎಬಿಎಸ್ ಸೌಲಭ್ಯ ಹೊಂದಿದ ಮೊದಲ ಮಾದರಿಯಾಗಿ ಗುರುತಿಸಿಕೊಂಡಿದ್ದು, ಎಬಿಎಸ್ ಜೊತೆಗೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.
ಎಂಜಿನ್ ಮತ್ತು ಪರ್ಫಾಮೆನ್ಸ್ ಹೊಸ ಪ್ಲಾಟಿನಾ 110 ಎಬಿಎಸ್ ಆವೃತ್ತಿಯಲ್ಲಿ ಸಾಮಾನ್ಯ ಮಾದರಿಯಲ್ಲಿರುವಂತೆ 115.45 ಸಿಸಿ, ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು 4-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ 8.44 ಹಾರ್ಸ್ ಪವರ್ ಮತ್ತು 9.81 ಎನ್‌ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಇಷ್ಟೇ ಅಲ್ಲದೇ ಈ ಹೊಸ ಬೈಕಿನಲ್ಲಿ ಸುರಕ್ಷತೆಗಾಗಿ ಸಿಂಗಲ್ ಚಾನೆಲ್ ಎಬಿಎಸ್ ಸೌಲಭ್ಯ ನೀಡಿರುವ ಬಜಾಜ್ ಕಂಪನಿಯು ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಸ್ಪೆಷಲ್ ಫೀಚರ್ಸ್ ಏನಿದೆ?

ಪ್ಲಾಟಿನಾ 110 ಎಬಿಎಸ್ ಮಾದರಿಗಾಗಿ ಬಜಾಜ್ ಕಂಪನಿಯು ಹೊಸ ಡಿಜಿಟಲ್ ಕನ್ಸೋಲ್ ಜೋಡಣೆ ಮಾಡಲಾಗಿದ್ದು, ಸ್ಪೀಡೋ ಮೀಟರ್ ಜೊತೆಗೆ ಗೇರ್ ಸೂಚಕ ಮತ್ತು ಎಬಿಎಸ್ ಸೂಚಕಗಳನ್ನು ಇದರಲ್ಲಿ ನೋಡಬಹುದಾಗಿದೆ.

ಇದರೊಂದಿಗೆ ಹೊಸ ಬೈಕ್ ಮಾದರಿಯು ಎಬೊನಿ ಬ್ಲ್ಯಾಕ್, ಗ್ಲೋಸ್ ಪ್ಯೂಟರ್ ಗ್ರೇ, ಕಾಕ್‌ಟೈಲ್ ವೈನ್ ರೆಡ್ ಮತ್ತು ಸ್ಯಾಫೈರ್ ಬ್ಲೂ ಎಂಬ ನಾಲ್ಕು ಬಣ್ಣಗಳ ಆಯ್ಕೆ ಹೊಂದಿದ್ದು, ಹೀರೋ ಸ್ಪ್ಲೆಂಡರ್ ಪ್ಲಸ್, ಹೋಂಡಾ ಸಿಡಿ 110 ಡ್ರೀಮ್ ಮತ್ತು ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್ ಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *