ಸಿಟಿ ರವಿ ವಿರುದ್ಧ ‘ಲಕ್ಷ್ಮೀ’ ಆರ್ಭಟ; ವಿಡಿಯೋ ರಿಲೀಸ್ ಮಾಡಿ ಹೆಬ್ಬಾಳ್ಕರ್ ಕೌಂಟರ್
ನ್ಯೂಸ್ ಆ್ಯರೋ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಸಿಟಿ ರವಿ ಅವರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂಬ ಆರೋಪದ ವಿಚಾರ ರಾಜ್ಯದಲ್ಲಿ ಭಾರೀ ಸದ್ದು ಮಾಡಿದೆ. ಸಿಟಿ ರವಿ ನಾನು ಹಾಗೇ ಮಾತನಾಡಿಲ್ಲ ಅಂತ ಹೇಳಿದ್ದರು.
ಆದರೆ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 2 ವಿಡಿಯೋ ರಿಲೀಸ್ ಮಾಡಿ ಬಿಜೆಪಿಗೆ ಕೌಂಟರ್ ಕೊಟ್ಟಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡುವಾಗ ಸಿಟಿ ರವಿ ಮಾತನಾಡಿರೋ ವಿಡಿಯೋ ರಿಲೀಸ್ ಮಾಡ್ತೀನಿ ಅಂತ ಹೇಳಿದ್ದರು. ಅದರಂತೆ ಇದೀಗ ಎರಡು ವಿಡಿಯೋ ರಿಲೀಸ್ ಮಾಡಿ ಬಿಜೆಪಿ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದ್ದಾರೆ. ಸಿಟಿ ರವಿ ಆಕ್ಚೇಪಾರ್ಹ ಹೇಳಿಕೆ ಇರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿ.ಟಿ ರವಿ ಬಳಸಿದ ಪದ ಬಳಕೆಯ ವಿಡಿಯೋ ರೀಲಿಸ್ ಮಾಡಿ ಬಿಜೆಪಿಗೆ ಕೌಂಟರ್ ಕೊಟ್ಟಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ರಿಲೀಸ್ ಮಾಡಿ ಠಕ್ಕರ್ ಕೊಟ್ಟಿದ್ದಾರೆ. ಎರಡು ಪ್ರತ್ಯೇಕ ವಿಡಿಯೋ ರಿಲೀಸ್ ಮಾಡಿ ಬಿಜೆಪಿ ನಾಯಕರಿಗೆ ಕೌಂಟರ್ ಕೊಟ್ಟಿದ್ದಾರೆ.
ಒಂದು ವಿಡಿಯೋದಲ್ಲಿ ಸಿಟಿ ರವಿ ಆಕ್ಷೇಪಾರ್ಹ ಪದ ಬಳಸಿದ್ದು, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋ ರಿಲೀಸ್ ಮಾಡಿದ್ದಾರೆ. ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ರು. ಎರಡು ದಿನ ನಾನು ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. 26 ವರ್ಷ ಸಂಘರ್ಷದಿಂದ ಮೇಲೆ ಬಂದಿದ್ಧೇನೆ.
ನಾನು ರೆಡ್ ಕಾರ್ಪೆಟ್ ಮೇಲೆ ನಡೆದು ಬಂದಿಲ್ಲ. ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ.ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
Leave a Comment