ವರ್ಷದ ಮೊದಲ ದಿನವೇ ಗುಡ್​​ನ್ಯೂಸ್​: ಸಿಲಿಂಡರ್ ಬೆಲೆಯಲ್ಲಿ ಇಳಿಕೆ

LPG Cylinder Price Cut
Spread the love

ನ್ಯೂಸ್ ಆ್ಯರೋ: ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಗುಡ್​​ನ್ಯೂಸ್ ಸಿಕ್ಕಿದೆ. LPG ಗ್ಯಾಸ್ ಸಿಲಿಂಡರ್ ರಿಫಿಲ್ ಮತ್ತಷ್ಟು ಅಗ್ಗವಾಗಿದೆ. ಸರ್ಕಾರಿ ತೈಲ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಲ್ಲಿದೆ.

ಪ್ರತಿ ಎಲ್​​ಪಿಜಿ ಸಿಲಿಂಡರ್ ಬೆಲೆಯಲ್ಲಿ 14.50 ರೂಪಾಯಿ ಇಳಿಕೆ ಆಗಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಹೊಸ ಬೆಲೆ 1818.50 ರೂಪಾಯಿಯಿಂದ 1804 ರೂಪಾಯಿಗೆ ಇಳಿಕೆ ಆಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲನೇ ದಿನದಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಶೀಲಿಸಿ ಹೊಸ ಬೆಲೆ ಪ್ರಕಟಿಸುತ್ತವೆ.

ಹೊಸ ವರ್ಷದಂದು ತಮ್ಮ ಗ್ರಾಹಕರಿಗೆ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲು ನಿರ್ಧರಿಸಿವೆ. ಕೋಲ್ಕತ್ತಾದಲ್ಲಿ 1911 ರೂಪಾಯಿಗೆ ಇಳಿಕೆ ಆಗಿದೆ. ಈ ಮುಂಚೆ 1927 ರೂಪಾಯಿ ಪಾವತಿ ಮಾಡಬೇಕಾಗಿತ್ತು.

ಮುಂಬೈನಲ್ಲಿ ಸಿಲಿಂಡರ್ ಬೆಲೆ 1756 ರೂಪಾಯಿಗೆ ಇಳಿಕೆ ಆಗಿದೆ. ಚೆನ್ನೈನಲ್ಲಿ ಇವತ್ತಿನಿಂದ 19 ಕೆಜಿ ಸಿಲಿಂಡರ್​ಗೆ 1966 ರೂಪಾಯಿ ಪಾವತಿ ಮಾಡಬೇಕಾಗುತ್ತದೆ.

Leave a Comment

Leave a Reply

Your email address will not be published. Required fields are marked *

error: Content is protected !!