ದೇಶದ 11ನಗರಗಳಲ್ಲಿ ಟ್ರೂ 5ಜಿ ಸೇವೆಗೆ ಚಾಲನೆ: ಸಾಂಸ್ಕೃತಿಕ ನಗರಿ ಮೈಸೂರಿನ ಗ್ರಾಹಕರಿಗೂ ಗುಡ್‌ ನ್ಯೂಸ್‌

ದೇಶದ 11ನಗರಗಳಲ್ಲಿ ಟ್ರೂ 5ಜಿ ಸೇವೆಗೆ ಚಾಲನೆ: ಸಾಂಸ್ಕೃತಿಕ ನಗರಿ ಮೈಸೂರಿನ ಗ್ರಾಹಕರಿಗೂ ಗುಡ್‌ ನ್ಯೂಸ್‌

ನ್ಯೂಸ್ ಆ್ಯರೋ: ಮೈಸೂರು ಸೇರಿದಂತೆ ದೇಶದ 11 ನಗರಗಳಲ್ಲಿ ರಿಲಯನ್ಸ್ ಜಿಯೋ ತನ್ನ ಟ್ರೂ 5ಜಿ ಸೇವೆ ಆರಂಭಗೊಂಡಿದೆ. ಲಕ್ನೋ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿ ನಗರಗಳಲ್ಲಿ ಟ್ರೂ 5ಜಿ ಸೇವೆಗೆ ಚಾಲನೆ ನೀಡಲಾಗಿದೆ.

ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್‌+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತದೆ. ಸದ್ಯ ಇದು ಸಂಪೂರ್ಣವಾಗಿ ಆಹ್ವಾನಿತ ಸೇವೆಯಾಗಿದ್ದು ಅಂದರೆ Invite Only Basisನಲ್ಲಿ ಬಳಕೆದಾರರಿಗೆ ಲಭ್ಯವಿದೆ.

ಈ ಸಂಬಂಧ ಪ್ರತಿಕ್ರಿಯಿಸಿದ ಜಿಯೋ ವಕ್ತಾರರು, ಮೈಸೂರು ನಗರದಲ್ಲಿ 5ಜಿ ಆರಂಭಿಸುವುದು ನಮಗೆ ಹೆಮ್ಮೆಯ ವಿಚಾರ. ಟ್ರೂ 5ಜಿ ಸೇವೆಗಳನ್ನು ಪರಿಚಯಿಸಲಾರಂಭಿಸಿದ ಅಂದಿನಿಂದ ನಮ್ಮ ಅತಿದೊಡ್ಡ ಆರಂಭದಲ್ಲಿ ಇದು ಒಂದಾಗಿದೆ. ಜಿಯೋ ಟ್ರೂ 5ಜಿ ತಂತ್ರಜ್ಞಾನದ ವೇರಿಯಂಟ್‌ ಪ್ರಯೋಜನಗಳನ್ನು ಬಳಕೆದಾರರು ಆನಂದಿಸಬೇಕು. 2023ರ ಹೊಸ ವರ್ಷವನ್ನು ಎದುರುಗೊಳ್ಳುತ್ತಿರುವ ಲಕ್ಷಾಂತರ ಜಿಯೋ ಬಳಕೆದಾರರಿಗೆ ಜಿಯೋ ಟೆಲಿಕಾಂ ಕಂಪನಿಯ ಕೊಡುಗೆಯೆಂಡೆ ಹೇಳಬಹುದು.

ಮೈಸೂರನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ ಎಂದು ಜಿಯೋ ಹೇಳಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *