ಭೀಕರ ರಸ್ತೆ ಅಪಘಾತ – ಗಂಭೀರವಾಗಿ ಗಾಯಗೊಂಡ ಟೀಮ್ ಇಂಡಿಯಾ ಕ್ರಿಕೆಟಿಗ ರಿಷಭ್ ಪಂತ್
- ಕ್ರೀಡಾ ಸುದ್ದಿ
- December 30, 2022
- No Comment
- 293
ನ್ಯೂಸ್ ಆ್ಯರೋ : ಟೀಂ ಇಂಡಿಯಾದ ವಿಕೆಟ್ ಕೀಪರ್, ಭರವಸೆಯ ಯುವ ಪ್ರತಿಭೆ ರಿಷಭ್ ಪಂತ್ ಅವರು ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಇಂದು ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಭ್ ಅವರನ್ನು ದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು ಎಂದು ಮಾಧ್ಯಮಗಳು ವರದಿ ಮಾಡಿವೆ.
ಘಟನೆಯಲ್ಲಿ ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸದ್ಯದ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್ ಮಾಹಿತಿ ನೀಡಿದ್ದಾರೆ.
ಸ್ಥಳೀಯರ ಮಾಹಿತಿಯಂತೆ, ರಿಷಬ್ ಅವರ ಕಾರು ರೇಲಿಂಗ್ಗೆ ಡಿಕ್ಕಿ ಹೊಡೆದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಕೂಡಲೇ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ಸಾಗಿಸಲಾಗಿತ್ತು.