ರೇಣುಕಾಸ್ವಾಮಿ ಕೊಲೆ ಕೇಸ್; ಜೈಲಿನಿಂದ ಮೂವರು ಆರೋಪಿಗಳು ರಿಲೀಸ್

three accused released
Spread the love

ತುಮಕೂರು: ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. A-16 ಕೇಶವಮೂರ್ತಿ, A-15 ಕಾರ್ತಿಕ್, A-17 ನಿಖಿಲ್ ನಾಯಕ್ ತುಮಕೂರು ಜೈಲಿನಿಂದ ಇಂದು ಬೆಳಗ್ಗೆ ಬಿಡುಗಡೆಯಾಗಿದ್ದಾರೆ.

ಕಳೆದ ತಿಂಗಳ ಸೆಪ್ಟೆಂಬರ್ 23 ರಂದು ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. 10 ದಿನಗಳ ಬಳಿಕ ಮೂವರು ಇಂದು ಹೊರಬಂದಿದ್ದಾರೆ. ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ನಿಂದ ಜಾಮೀನು ಸಿಕ್ಕರೆ ಆರೋಪಿ ನಿಖಿಲ್ ನಾಯಕ್ ಹಾಗೂ ಕಾರ್ತಿಕ್ ಗೆ 57ನೇ ಸಿಸಿಹೆಚ್ ಕೋರ್ಟ್​ನಿಂದ ಜಾಮೀನು ಸಿಕ್ಕಿತ್ತು.

ಕೋರ್ಟ್​ನಲ್ಲಿ ಜಾಮೀನು ಸಿಕ್ಕರೂ ಶ್ಯೂರಿಟಿದಾರರು ಸಿಗದೇ ಪರದಾಟ ನಡೆಸಿದ್ದರು. ಸತತ 9 ದಿನಗಳಿಂದ ಶ್ಯೂರಿಟಿದಾರರು ಸಿಗದೇ ಕುಟುಂಬಸ್ಥರು ಸಂಕಷ್ಟ ಎದುರಿಸಿದ್ದರು. ನಿನ್ನೆ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿತ್ತು. ಇಂದು ಬಿಡುಗಡೆ ಪ್ರಕ್ರಿಯೆ ಮುಗಿಸಿ ಮೂವರು ಆರೋಪಿಗಳು ಜೈಲಿನಿಂದ ರಿಲೀಸ್ ಆಗಿದ್ದಾರೆ.

Leave a Comment

Leave a Reply

Your email address will not be published. Required fields are marked *