ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯ; ಮಣಿಪಾಲದ ಹಿಂದೂ ವೈದ್ಯ ವಿದ್ಯಾರ್ಥಿನಿಗೆ ಪ್ರೀತಿ ಹೆಸರಿನಲ್ಲಿ ಕಿರುಕುಳ..!!
ನ್ಯೂಸ್ ಆ್ಯರೋ : ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ ಮತ್ತು ರಾಜಸ್ಥಾನದಿಂದ ಮಣಿಪಾಲಕ್ಕೆ ಬಂದಿದ್ದರು. ಈ ನಡುವೆ ವೈದ್ಯ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗಲೇ ಮಹಮ್ಮದ್ ಡ್ಯಾನಿಷ್ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ. ಆದರೆ ಇಸ್ಲಾಂಗೆ ಮತಾಂತರವಾಗಬೇಕೆಂದು ಸಂತ್ರಸ್ತೆಗೆ ಷರತ್ತು ಹಾಕಿದ್ದ. ಈ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ಆ.31ರಂದು ದೂರು ದಾಖಲಾಗಿತ್ತು.
ಮಹಮ್ಮದ್ ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇವರಿಬ್ಬರು ಕ್ಯಾಂಪಸ್‌ನಲ್ಲಿ ಪರಿಚಯವಾಗಿದ್ದರು. ಬಳಿಕ ಮಹಮ್ಮದ್ ಡ್ಯಾನಿಷ್ ಸಂತ್ರಸ್ತೆಯ ಫೋನ್ ನಂಬರ್ ಪಡೆದುಕೊಂಡು ಗೆಳೆತನ ಬೆಳೆಸಿದ್ದ. ನಂತರ 2024ರ ಜ.22 ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನಂತೆ.
2024ರ ಮಾ.11ರಂದು ಸಂತ್ರಸ್ತೆ ಯುವತಿ ಆರೋಪಿ ಮಹಮ್ಮದ್ ರೂಮಿಗೆ ತೆರಳಿದ್ದಳಂತೆ. ಆಗ ಆತ ಮತಾಂತರಕ್ಕೆ ಒತ್ತಾಯಿಸಿದ್ದನಂತೆ. ಮತಾಂತಕ್ಕೆ ನಿರಾಕರಿಸಿದಾಗ ಆರೋಪಿ ಮಹಮ್ಮದ್ ಸಂತ್ರಸ್ತೆಯ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಸಿದ್ದಾಳೆ. ಜತೆಗೆ ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದ ಎಂಬ ಆರೋಪವೂ ಇದೆ.
2024ರ ಆ.28 ರವರೆಗೂ ಫೋನ್‌ನಲ್ಲಿ ತನ್ನನ್ನು ಸಂಪರ್ಕಿಸಿ ನಿರಂತರ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಪ್ರಕರಣದ ಸಂಬಂಧ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್ (27) ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Leave a Comment