ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದ ಬೆಳ್ತಂಗಡಿಯ ಟೆಕ್ಕಿ; ನಿಶ್ಚಿತಾರ್ಥ ರದ್ದು
ನ್ಯೂಸ್ ಆ್ಯರೋ : ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಟೆಕ್ಕಿಯೊಬ್ಬ ವೇಶ್ಯಾವಾಟಿಕೆ ದಂಧೆಯಲ್ಲಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾನೆ. ಈ ವಿಷಯ ತಿಳಿದಿದ್ದಂತೆ ಇದನ್ನು ನಿಶ್ಚಿತಾರ್ಥ ರದ್ದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಬೆಳ್ತಂಗಡಿ ಮೂಲದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದ ಟೆಕ್ಕಿ ಸುಬ್ರಮಣ್ಯ ಶಾಸಿ, ಹೊಂಗಸಂದ್ರದ ಕರಿಷ್ಮಾಶೇಖ್ ಅಲಿಯಾಸ್ ಮುಸ್ಕಾನ್ ಹಾಗೂ ಶಾಂತಿಪುರದ ಸೂರಜ್ ಶಾಹಜೀ ಬಂಧಿತರು.
ಆರೋಪಿಗಳಾದ ಕರಿಷ್ಮಾ ಹಾಗೂ ಸೂರಜ್ ಮೂಲತಃ ಪಶ್ಚಿಮ ಬಂಗಾಳದ ರಾಜ್ಯದವರು ಎಂದು ಗುರುತಿಸಲಾಗಿದೆ. ಇವರು ಹಲವು ವರ್ಷಗಳ ಹಿಂದೆ ನಗರಕ್ಕೆ ಉದ್ಯೋಗಕ್ಕಾಗಿ ಬಂದಿದ್ದು, ನಂತರ ವೇಶ್ಯಾವಾಟಿಕೆ ದಂಧೆಗೆ ಇಳಿದಿದ್ದರು. ನಗರದಲ್ಲಿ ಮನೆ ಬಾಡಿಗೆ ಪಡೆದು ಅಲ್ಲಿ ತಮ್ಮ ದಂಧೆಯನ್ನು ನಡೆಸುತ್ತಿದ್ದರು.
ಕೆಲ ದಿನಗಳ ಹಿಂದೆ ಬಾಂಗ್ಲಾದೇಶದ ಇಬ್ಬರು ಬಾಲಕಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಿದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಗ್ರಾಹಕ ಟೆಕ್ಕಿ ಕೂಡ ಸಿಕ್ಕಿಬಿದ್ದಿದ್ದಾನೆ. ಈತ ಆ ಮನೆಗೆ ಎರಡನೇ ಬಾರಿ ಬಂದಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ಇನ್ನು ಆರಂಭದಲ್ಲಿ ಸಂತ್ರಸ್ತೆಯರು ತಾವು ಪಶ್ಚಿಮ ಬಂಗಾಳ ರಾಜ್ಯದವರು ಎಂದು ಹೇಳಿದ್ದು, ಆಧಾರ್ ಸೇರಿ ಇತರೆ ದಾಖಲೆಗಳನ್ನು ನೀಡಿದರು. ಆದರೆ ಕೂಲಂಕುಷವಾಗಿ ವಿಚಾರಣೆ ನಡೆಸಿದ್ದಾಗ ಆ ಬಾಲಕಿಯರು ಅಕ್ರಮ ಬಾಂಗ್ಲಾದೇಶದ ವಲಸಿಗರು ಎಂಬುದು ತಿಳಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Leave a Comment