ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ್ದಕ್ಕೆ ಸ್ನೇಹಿತರಿಂದ ಅವಮಾನ; ಮನನೊಂದು ಯುವಕ ಆತ್ಮಹತ್ಯೆಗೆ ಯತ್ನ

trending pant
Spread the love

ನ್ಯೂಸ್ ಆ್ಯರೋ: ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ್ದನ್ನು ಸ್ನೇಹಿತರು ಅವಮಾನಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಘಟನೆ ನಡೆದಿದ್ದು, 21 ವಯಸ್ಸಿನ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಯುವಕ ಬಂದಿದ್ದ. ಈ ವೇಳೆ ಶಬೀರ್, ಅನೀಶ್ ಪಣಕಜೆ, ಸಲೀಂ ಎಂಬವರು ಸೇರಿ ಆತನನ್ನು ಲೇವಡಿ ಮಾಡಿದ್ದಾರೆ.

ಮೂವರು ಸ್ನೇಹಿತರು ಸೇರಿ ಯುವಕ ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್‌ನ್ನು ಗೋಣಿಚೀಲದ ಡಬ್ಬಳದಿಂದ ಹೊಲಿದು ಅದರ ವಿಡಿಯೋ ಮಾಡಿ ಅವಮಾನಿಸಿದ್ದಾರೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಡಬ್ಬಳದಿಂದ ಪ್ಯಾಂಟ್‌ನ ಹರಿದ ಭಾಗವನ್ನು ಹೊಲಿಯುವ ವೀಡಿಯೋವನ್ನ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಇದರಿಂದ ಬೇಸತ್ತು ಯುವಕ ಸಂಬಂಧಿಕರ ಮನೆಯಲ್ಲಿ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Leave a Comment

Leave a Reply

Your email address will not be published. Required fields are marked *

error: Content is protected !!