ಕಾರ್‌ನ ಮೇಲೆ ಬಿದ್ದ ಕಂಟೇನರ್ ಲಾರಿ; 6 ಮಂದಿಯ ದೇಹ ಛಿಧ್ರ !

ನ್ಯೂಸ್ ಆ್ಯರೋ: ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. 2 ಕಾರು, 2 ಲಾರಿ, ಶಾಲಾ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ನೆಲಮಂಗಲದ ಟಿ.ಬೇಗೂರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಸರಣಿ ಅಪಘಾತ ನಡೆದಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿರುವರ ರಕ್ಷಣೆ ಕಾರ್ಯ ನಡೆಯುತ್ತಿದೆ.
ಡಿಕ್ಕಿಯಾದ ರಭಸಕ್ಕೆ ಪಲ್ಟಿಯಾದ ಕಂಟೈನರ್ ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಕಾರಿನಲ್ಲಿದ್ದ ಮಗು ಸೇರಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನೆಲಮಂಗಲದ ಟಿ.ಬೇಗೂರ ಬಳಿ ನಡೆದ ಸರಣಿ ಅಪಘಾತದಲ್ಲಿ 2 ಕಾರು, 2 ಲಾರಿ, ಶಾಲಾ ವಾಹನ ಜಖಂ ಆಗಿವೆ. ವೋಲ್ವೋ ಕಂಪನಿಯ ಕಾರು ಇದಾಗಿದ್ದು, ಮೃತರನ್ನು 42 ವರ್ಷದ ಗೌರಾಬಾಯಿ, 12 ವರ್ಷದ ದೀಕ್ಷಾ, 16 ವರ್ಷದ ಧ್ಯಾನ್ ಮತ್ತು ಆರ್ಯ ಎಂದು ಗುರುತಿಸಲಾಗಿದ್ದು, ಇನ್ನುಳಿದವರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ. ವಿಜಯಪುರ ಮೂಲದ ಇಂಜಿನಿಯರ್ ಕುಟುಂಬ ಎನ್ನುವ ಮಾಹಿತಿ ಸಿಕ್ಕಿದ್ದು, ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ.
Leave a Comment