ಹಸುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ; ಆರೋಪಿ ಸೈಯದ್ ನಸ್ರು ಬಂಧನ

BNG 1
Spread the love

ನ್ಯೂಸ್ ಆ್ಯರೋ: ಚಾಮರಾಜಪೇಟೆಯ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿದ್ದ ಆರೋಪಿಯನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಚಂಪಾರಣ್ ಜಿಲ್ಲೆಯ ಶೇಕ್ ನಸ್ರು (30) ಬಂಧಿತ‌ ಆರೋಪಿ. ರಸ್ತೆ ಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಭಾನುವಾರ ಬೆಳಗ್ಗಿನ ಜಾವ ನಡೆದಿತ್ತು.

ಹಸುಗಳ ಮಾಲೀಕ ನೀಡಿದ ದೂರಿನ ಅನ್ವಯ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 325 (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಕಾಯ್ದೆಯಡಿ ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಆರೋಪಿ ಶೇಕ್ ನಸ್ರು ಘಟನಾ ಸ್ಥಳದಿಂದ 50 ಮೀಟರ್ ದೂರದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಬಟ್ಟೆಯ ಬ್ಯಾಗ್‌ಗಳನ್ನು ಹೊಲಿಯುವ ಅಂಗಡಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಮದ್ಯದ ಅಮಲಿನಲ್ಲಿ ದುಷ್ಕೃತ್ಯ ಎಸಗಿರುವುದು ತನಿಖೆ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಜನವರಿ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಮಾಹಿತಿ ನೀಡಿದ್ದಾರೆ.

ಏನಿದು ಘಟನೆ?:

ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು. ಹಸುಗಳ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ​ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.

ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್​ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.

Leave a Comment

Leave a Reply

Your email address will not be published. Required fields are marked *

error: Content is protected !!