ಹೆಚ್.ಡಿಕೆ ವಿರುದ್ಧ ಮತ್ತೊಂದು ಕೇಸ್ ದಾಖಲು; ಎಡಿಜಿಪಿ ಅವರಿಂದ ಈ ಕಂಪ್ಲೇಂಟ್ ಯಾಕೆ ?
ನ್ಯೂಸ್ ಆ್ಯರೋ: ಎಸ್‌ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ. ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಹಾಗೂ ಕರ್ನಾಟಕ ಕೆಡರ್ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಚಂದ್ರಶೇಖರ್ ಅವರು ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ ಕೆಡರ್ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಸುಳ್ಳು ದಾಖಲೆ ಪಡೆದು ಕರ್ನಾಟಕ ಕೆಡರ್ನಲ್ಲಿದ್ದೇನೆಂದು ಸುಳ್ಳು ಆರೋಪ ಮಾಡಿದ್ದಾರೆ. ಹಾಗೇ ಲಂಚ ಪಡೆದಿದ್ದಾಗಿ ನನ್ಮೇಲೆ ಸುಳ್ಳು ಆರೋಪಿಸಿದ್ದಾರೆ.
ಇನ್ನು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕ್ರಮಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸಹ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮುಂದುವರೆದು. . ಅತ್ಯಂತ ಕೀಳುಮಟ್ಟದ ಕ್ರಿಮಿನಲ್ಗಳು ಕೂಡ ಕುಟುಂಬ ಮತ್ತು ಮಕ್ಕಗಳನ್ನು ತಮ್ಮ ದ್ವೇಷ ವ್ಯವಹಾರದಿಂದ ದೂರವಿಡುತ್ತಾರೆ. ಆದ್ರೆ, ಕುಮಾರಸ್ವಾಮಿಯವರು ನನ್ನ ಕುಟುಂಬದ ಮೇಲೆಯೂ ಸುಳ್ಳು ಆರೋಪ ಹೊರಿಸಿ ಬೆದರಿಯೊಡ್ಡಿದ್ದಾರೆ ಎಂದು ಎಡಿಜಿಪಿ ಆರೋಪಿಸಿದ್ದಾರೆ.
ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿಯವರ ಆಪ್ತ ಸುರೇಶ್ ಬಾಬಯ ಕೂಡ ನನ್ನ ವಿರುದ್ಧ ಕ್ರಮಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಚಂದ್ರಶೇಖರ್ ಅವರು ಸಂಜಯ್ ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Leave a Comment