ಇಂದಿನಿಂದ ಮಂಡ್ಯದಲ್ಲಿ ಅಕ್ಷರ ಜಾತ್ರೆ; ರಾಜವಂಶಸ್ಥರಾದ ಪ್ರಮೋದಾದೇವಿ ಅವರಿಂದ ಚಾಲನೆ

Mandya
Spread the love

ನ್ಯೂಸ್ ಆ್ಯರೋ: ಸಕ್ಕರೆ ನಾಡು ಮಂಡ್ಯದಲ್ಲಿ ಮೂರನೇ ಬಾರಿಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. 30 ವರ್ಷಗಳ ಬಳಿಕ ಅದ್ದೂರಿಯಾಗಿ ನುಡಿ ಜಾತ್ರೆಯ ಆತಿಥ್ಯ ಉಣಬಡಿ ಸಲು ನಗರ ಸಜ್ಜುಗೊಂಡಿದೆ. ಸಾಹಿತಿಗಳು- ಸಾಹಿತ್ಯಾಸಕ್ತರನ್ನು ಸ್ವಾಗತಿ ಸಲು ಇಡೀ ಮಂಡ್ಯ ನಗರ ನವ ವಧುವಿನಂತೆ ಸಿಂಗಾರಗೊಂಡಿದೆ. ಬಂಟಿಂಗ್ಸ್, ಕಟೌಟ್, ವಿದ್ಯುತ್ ದೀಪಾಲಂಕಾರದಿಂದ ಇಡೀ ನಗರ ಕಂಗೊಳಿಸುತ್ತಿದೆ. ಮೈಸೂರು ದಸರಾ ಮಾದರಿಯಲ್ಲಿ ನಗರದಲ್ಲಿ ದೀಪಾಲಂಕಾರ ಮಾಡಲಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್‌ಎಂ.ವಿಶ್ವೇಶ್ವರಯ್ಯ ಕಲಾಕೃತಿ ಆಕರ್ಷಣೆಯಾಗಿದೆ.

ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ದೀಪಾ ಲಂಕಾರದ ಪ್ರಮುಖ ಆಕರ್ಷಣೆಯಾಗಿವೆ. ಸಮ್ಮೇಳನಾಧ್ಯಕ್ಷ, ಹಿರಿಯ ಸಾಹಿತಿ ಗೊ. ರು.ಚನ್ನಬಸಪ್ಪ ಗುರುವಾರ ಸಂಜೆ 5 ಗಂಟೆಗೆ ನಗರಕ್ಕೆ ಆಗಮಿಸಿದ್ದು, ಸಚಿವ ಎನ್.ಚಲುವರಾಯ ಸ್ವಾಮಿ ನೇತೃತ್ವದಲ್ಲಿ ಜಿಲ್ಲಾಡಳಿತದಿಂದ ಸ್ವಾಗತಿಸಿ ಆತಿಥ್ಯ ನೀಡಲಾಯಿತು. ಶುಕ್ರವಾರ ನುಡಿಜಾತ್ರೆಗೆ ಚಾಲನೆ ದೊರೆಯಲಿದ್ದು, ರಾಷ್ಟ್ರಧ್ವಜವನ್ನು ಸಚಿವ ಎನ್. ಚಲುವರಾಯಸ್ವಾಮಿ, ಪರಿಷತ್ತಿನ ಧ್ವಜವನ್ನು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್‌ ಜೋಶಿ, ನಾಡಧ್ವಜವನ್ನು ಪರಿಷತ್ತಿನ ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ನೆರವೇರಿಸುವರು.

ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವಿಶೇಷ ರಥ ಸಿದ್ದಪಡಿಸಲಾಗಿದ್ದು, ಸರ್ ಎಂ.ವಿಶ್ವೇಶ್ ವರಯ್ಯ ಪ್ರತಿಮೆ ಮುಂಭಾಗ ಬೆಳಗ್ಗೆ 7 ಗಂಟೆಗೆ ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಚಾಲನೆ ನೀಡಲಿದ್ದಾರೆ. 154 ಕಲಾತಂಡಗಳಿಂದ ಮೆರವಣಿಗೆ ಕಳೆಗಟ್ಟಲಿದೆ. 800 ಮಹಿಳೆಯರು ಪೂರ್ಣಕುಂಭದಲ್ಲಿ ಪಾಲ್ಗೊಳ್ಳುವರು. ಮೆರವಣಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಮ್ಮೇಳನ ವೇದಿಕೆ ತಲುಪಲಿದೆ.

ಸಮ್ಮೇಳನದ ಪ್ರಧಾನ ವೇದಿಕೆಗೆ ರಾಜಮಾತೆ ಕೆಂಪನಂಜಮ್ಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಮಹಾಮಂಟಪಕ್ಕೆ ಸರ್ ಎಂ.ವಿಶ್ವೇಶ್ವರಯ್ಯ, ಮಹಾದ್ವಾರಕ್ಕೆ ಯಕ್ಷಕವಿ ಕೆಂಪಣ್ಣಗೌಡ ಮತ್ತು ಉಭಯ ಕವಿತಾ ವಿಶಾರದ ಷಡಕ್ಷರ ದೇವ, ಪ್ರವೇಶ ದ್ವಾರಕ್ಕೆ ಶ್ರೇಷ್ಠ ರಾಜಕೀಯ ಮುತ್ಸದ್ದಿ ಎಸ್.ಎಂ.ಕೃಷ್ಣ ಮತ್ತು ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಹೆಸರನ್ನಿಡಲಾಗಿದೆ.

ಪ್ರಧಾನವೇದಿಕೆ ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಆರಂಭವಾಗಲಿದ್ದು,ಆದಿಚುಂಚನಗಿರಿ” ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಮ್ಮೇಳನ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾ ಟಿಸುವರು. ಸಮ್ಮೇಳನಾಧ್ಯಕ್ಷ ಸ್ಥಾನವನ್ನು ನಾಡೋಜ ಡಾ.ಗೊ.ರು.ಚನ್ನಬಸಪ್ಪ ವಹಿಸು ವರು. ಎಚ್.ಡಿ. ಎಚ್.ಡಿ.ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ, ಕೃಷಿ ಎನ್.ಚೆಲುವರಾಯಸ್ವಾಮಿ ಮೊದಲಾದವರು ಭಾಗವಹಿಸುವರು.

ಸಚಿವ ಸಮ್ಮೇಳನಕ್ಕಾಗಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರ ಜೊತೆಗಿನ ಸಂವಾದವೂ ಸೇರಿ11 ಗೋಷ್ಠಿ,2 ಸಮಾನಾಂತರ ವೇದಿಕೆಗಳಲ್ಲಿ 20 ಗೋಷ್ಠಿ ಆಯೋಜಿಸಲಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಲಾಮಂದಿರ, ಅಂಬೇಡ್ಕರ್‌ಭವನ, ಸಮಾನಾಂತರ ವೇದಿಕೆ ಮತ್ತು ಪ್ರಧಾನ ವೇದಿಕೆಗಳಲ್ಲಿ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳು, ಪ್ರಧಾನ ವೇದಿಕೆಯಲ್ಲಿ ನುಡಿ ಜಾತ್ರೆ ಸ್ವರ ಯಾತ್ರೆ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಮೊದಲ ದಿನ ಸಾಧುಕೋಕಿಲ ಮತ್ತು ರಾಜೇಶ್ ಕೃಷ್ಣನ್ ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ಗಮನ ಸಳೆಯಲಿದೆ. ನಾಡುನುಡಿಗೆ ಸೇವೆ ಸಲ್ಲಿಸಿದ 170 ಮಂದಿ ಸಾಧಕರನ್ನು ಸಮ್ಮೇಳನದಲ್ಲಿ ಸನ್ಮಾನಿಸಲಾಗು ತ್ತಿದೆ. ಸಮ್ಮೇಳನದ ಸ್ಮರಣಾರ್ಥ 87 ಪುಸ್ತಕಗ ಳನ್ನು ಬಿಡುಗಡೆ ಮಾಡಲಾಗುತ್ತಿದ್ದು, ‘ಬೆಲ್ಲದಾ ರತಿ’ ಹೆಸರಿನ ಸ್ಮರಣ ಸಂಚಿಕೆ ಕೂಡ ಹೊರತಲಾ ಗುತ್ತಿದೆ. ಸಮ್ಮೇಳನದಲ್ಲಿ 450 ಪುಸ್ತಕ ಮಳಿಗೆ, 55 ವಸ್ತುಪ್ರದರ್ಶನ ಮಳಿಗೆ, 350 ವಾಣಿಜ್ಯ ಮಳಿಗೆ ಇರಲಿವೆ.

ಒಟ್ಟಾರೆಯಾಗಿ ಸಮ್ಮೇಳನದಲ್ಲಿ ಭಾಗವಹಿಸುವ 3 ಲಕ್ಷ ಜನರಿಗೆ ಉತ್ತರ-ದಕ್ಷಿಣ ಕರ್ನಾಟಕ ಶೈಲಿಯ ಭೋಜನ ಸಿದ್ದಗೊಳ್ಳುತ್ತಿದ್ದು, 350 ಜನ ಬಾಣಸಿಗರು ಅಡುಗೆ ತಯಾರಿಯಲ್ಲಿ ತೊಡಗಿದ್ದಾರೆ. 900 ಜನ ಊಟ ಬಡಿಸಲು ನಿಯೋಜಿಸಲಾಗಿದೆ. ಊಟಕ್ಕೆ 100 ಕೌಂಟರ್, ನೊಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್ ತೆರೆಯಲಾಗಿದೆ. ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ. 6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರೆಶ್, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಕಿಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

https://twitter.com/BSindanur/status/1869683648985018850

Leave a Comment

Leave a Reply

Your email address will not be published. Required fields are marked *

error: Content is protected !!