ಚಾರಣ ಪಥದಲ್ಲಿ ಇನ್ಮುಂದೆ ಪ್ಲಾಸ್ಟಿಕ್, ಮಾದಕ ವಸ್ತು ನಿಷೇಧ : ಉಲ್ಲಂಘಿಸಿದ್ರೆ ದಂಡ ಫಿಕ್ಸ್

alert the trekking path
Spread the love

ನ್ಯೂಸ್ ಆ್ಯರೋ : ಚಾರಣ ಪಥ ಮತ್ತು ಅರಣ್ಯದೊಳಗಿನ ರಸ್ತೆಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ನೀರಿನ ಬಾಟಲಿ, ಕ್ಯಾರಿಬ್ಯಾಗ್, ತಿಂಡಿ ಪೊಟ್ಟಣ, ಮದ್ಯದ ಬಾಟಲಿ, ಸಿಗರೇಟ್, ಬೆಂಕಿಪೊಟ್ಟಣ ನಿಷೇಧಿಸಲಾಗಿದೆ.ತಪಾಸಣೆ ವೇಳೆ ಇವುಗಳು ಕಂಡುಬಂದರೆ ದಂಡ ವಿಧಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ಪ್ರತಿದಿನ ತಲಾ 300 ಚಾರಣಿಗರಿಗೆ ಮಾತ್ರ ಅವಕಾಶ ನೀಡಲಾಗುವುದು. ಆನ್ಲೈನ್ ಮೂಲಕ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅರಣ್ಯ ವಿಹಾರ ವೆಬ್ಸೈಟ್ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್ ಸಿಗದವರು ಬೇರೆ ಚಾರಣ ಪಥವನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

https://aranyavihaara.karnataka.gov.in/ ವೆಬ್ಸೈಟ್ ಮೂಲಕ ಈಗ 5 ತಾಣಗಳಿಗೆ ಟಿಕೆಟ್ ಕಾಯ್ದಿರಿಸಬಹುದಾಗಿದ್ದು, ಈ ತಿಂಗಳ ಕೊನೆಯೊಳಗೆ 40 ಚಾರಣಪಥಗಳನ್ನು ಸೇರಿಸಲಾಗುವುದು. ವನ್ಯಜೀವಿ ಸಫಾರಿ ಮತ್ತು ಬೋಟ್ ಸಫಾರಿಗೂ ಇದರಲ್ಲೇ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!