ಉಡುಪಿ ಜಿಲ್ಲಾದ್ಯಂತ ಪಿಯುವರೆಗಿನ ಮಕ್ಕಳಿಗೆ ರಜೆ ಘೋಷಣೆ – ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅಧಿಕೃತ ಆದೇಶ
ನ್ಯೂಸ್ ಆ್ಯರೋ : ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ಜುಲೈ 6ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿಯವರು ಆದೇಶ ನೀಡಿದ್ದಾರೆ.
ಈ ಮೊದಲು ಜಿಲ್ಲೆಯ ಎರಡು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಜಿಲ್ಲಾಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದು, ಆದೇಶದ ಪ್ರತಿಯನ್ನು ಇನ್ನು ಕೆಲವೇ ನಿಮಿಷಗಳಲ್ಲಿ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
Leave a Comment