ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ; ಅಲ್ಲು ಅರ್ಜುನ್ಗೆ 14 ದಿನ ನ್ಯಾಯಾಂಗ ಬಂಧನ
ನ್ಯೂಸ್ ಆ್ಯರೋ: ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಕೇಸ್ನಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿದ ನಂತರ ಪೊಲೀಸ್ರು ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ನಾಂಪಲ್ಲಿ ಕೋರ್ಟ್ನಲ್ಲಿ ಹಾಜರುಪಡಿಸಿದ್ರು.
ಕೋರ್ಟ್ ಈಗ ಮಹತ್ವದ ಆದೇಶ ಹೊರಡಿಸಿದ್ದು, 14 ದಿನಗಳ ಕಾಲ ಅಲ್ಲು ಅರ್ಜುನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನ ಈಗ ತೆಲುಗು ಇಂಡಸ್ಟ್ರಿಯಲ್ಲಿ ಹಾಟ್ ಟಾಪಿಕ್ ಆಗಿದೆ. ಪುಷ್ಪ-2 ಪ್ರೀಮಿಯರ್ ಶೋ ವೇಳೆ ನಡೆದ ದುರಂತ ಪ್ರಕರಣದಲ್ಲಿ ತೆಲುಗು ಬಿಗ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ ನಿವಾಸದಲ್ಲಿ ಬಂಧಿಸಿರುವ ಚಿಕ್ಕಡಪಲ್ಲಿ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ. ಅಲ್ಲಿ ಬಂಧನ ಪ್ರಕ್ರಿಯೆಯನ್ನು ಮುಗಿಸಿ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಕೋರ್ಟ್ ಆದೇಶದನ್ವಯ 14 ದಿನಗಳ ಕಾಲ ಅಲ್ಲು ಅರ್ಜುನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
Leave a Comment