ಚಳಿಗಾಲದಲ್ಲಿ ಪ್ರತಿಯೊಬ್ಬರೂ ಖರ್ಜೂರ ತಿನ್ನಲೇ ಬೇಕು; ಇದರಿಂದ ಎಷ್ಟೊಂದು ಲಾಭ ಇದೆ ನೋಡಿ

dates
Spread the love

ನ್ಯೂಸ್ ಆ್ಯರೋ: ಚಳಿಗಾಲದಲ್ಲಿ ಜನರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಆದ್ದರಿಂದ ಈ ಋತುವಿನಲ್ಲಿ ಅವರು ತಮ್ಮ ದೇಹವನ್ನು ಆರೋಗ್ಯವಾಗಿಡಲು ಆಹಾರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಭೇಕು. ಋತುವಿಗೆ ಅನುಗುಣವಾಗಿ ಕೆಲವು ವಸ್ತುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದು ತುಂಬಾ ಒಳ್ಳೆಯದು. ಮುಖ್ಯವಾಗಿ ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಯಾವೆಲ್ಲಾ ಪ್ರಯೋಜನಗಳು ದೊರೆಯುತ್ತವೆ ಎಂಬುದನ್ನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಹೆಚ್ಚಿನವರು ಆಗಾಗ್ಗೆ ಕೀಲು ನೋವಿನಿಂದ ಬಳಲುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಪ್ರತಿದಿನ ಕನಿಷ್ಠ ಪ್ರಮಾಣದ ಖರ್ಜೂರವನ್ನು ಸೇವಿಸಬಹುದು. ಚಳಿಗಾಲದಲ್ಲಿ ಸೂರ್ಯನ ಬೆಳಕು ಪಡೆಯುವುದು ಕಷ್ಟಕರವಾದ್ದರಿಂದ, ದೇಹದಲ್ಲಿ ವಿಟಮಿನ್ ಡಿ ಕೊರತೆಯನ್ನು ನೀಗಿಸಲು ಖರ್ಜೂರ ನಿಮಗೆ ಸಹಾಯ ಮಾಡುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ಎಲುಬುಗಳು ಮತ್ತು ಹಲ್ಲುಗಳನ್ನು ಬಲಪಡಿಸುತ್ತದೆ. ಇದಲ್ಲದೆ, ಇದರಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳಿವೆ. ಇದು ಎಲುಬುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗಿರುತ್ತದೆ. ಆದ್ದರಿಂದ ಚಳಿಗಾಲದಲ್ಲಿ ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಖರ್ಜೂರ ಸೇವಿಸಿ. ಇದು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

ಕರಗುವ ಮತ್ತು ಕರಗದ ನಾರಿನಂಶ ಖರ್ಜೂರದಲ್ಲಿದೆ. ಇವು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಜೀರ್ಣಾಂಗ ವ್ಯವಸ್ಥೆ ದುರ್ಬಲವಾಗಿರುವವರು ಚಳಿಗಾಲದಲ್ಲಿ ಖರ್ಜೂರ ಸೇವಿಸುವುದು ತುಂಬಾ ಪ್ರಯೋಜನಕಾರಿ.

ಖರ್ಜೂರವು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ, ಇದು ಮೆದುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದರಲ್ಲಿರುವ ಪೊಟ್ಯಾಸಿಯಮ್ ಮತ್ತು ವಿಟಮಿನ್ ಬಿ6 ನಂತಹ ಪೋಷಕಾಂಶಗಳು ಮೆದುಳಿಗೆ ತುಂಬಾ ಒಳ್ಳೆಯದು.

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ ಖರ್ಜೂರ ನಿಮಗೆ ತುಂಬಾ ಉಪಯುಕ್ತವಾಗಿದೆ. ಏಕೆಂದರೆ ಇದರಲ್ಲಿ ಕ್ಯಾಲೊರಿ ಕಡಿಮೆ ಮತ್ತು ನಾರಿನಂಶ ಹೆಚ್ಚು. ಇದನ್ನು ನಿರಂತರವಾಗಿ ಸೇವಿಸಿದರೆ ನಿಮ್ಮ ಹೊಟ್ಟೆ ದೀರ್ಘಕಾಲ ತುಂಬಿರುತ್ತದೆ ಮತ್ತು ಹೆಚ್ಚು ತಿನ್ನುವುದನ್ನು ತಪ್ಪಿಸಬಹುದು. ಇದರಿಂದ ನಿಮ್ಮ ತೂಕವನ್ನು ಸುಲಭವಾಗಿ ಕಡಿಮೆ ಮಾಡಬಹುದು.

ಚಳಿಗಾಲದಲ್ಲಿ ಶೀತ, ಕೆಮ್ಮು ಬರುವುದು ಸಾಮಾನ್ಯ. ಇದರಿಂದ ಪರಿಹಾರ ಪಡೆಯಲು ಖರ್ಜೂರ ತುಂಬಾ ಪರಿಣಾಮಕಾರಿ. ಏಕೆಂದರೆ ಇದರಲ್ಲಿರುವ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ ಶೀತ, ಕೆಮ್ಮನ್ನು ತಡೆಯುತ್ತದೆ.

ಚಳಿಗಾಲದಲ್ಲಿ ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಖರ್ಜೂರ ತುಂಬಾ ಸಹಾಯ ಮಾಡುತ್ತದೆ. ಇದರಲ್ಲಿರುವ ನಾರಿನಂಶ ಮತ್ತು ವಿಟಮಿನ್ ಸಿ ದೇಹದಲ್ಲಿರುವ ಕಬ್ಬಿಣವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ಮಧುಮೇಹಿಗಳಿಗೆ ಚಳಿಗಾಲದಲ್ಲಿ ಸಿಹಿ ತಿನ್ನಬೇಕೆಂಬ ಆಸೆ ಇದ್ದರೆ ಖರ್ಜೂರವನ್ನು ಪ್ರತಿದಿನ ಸೇವಿಸಬಹುದು. ಖರ್ಜೂರ ಸಿಹಿಯಾಗಿದ್ದರೂ, ಇದು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ಏಕೆಂದರೆ ಇದರ ಗ್ಲೈಸೆಮಿಕ್ ಸೂಚ್ಯಂಕ ತುಂಬಾ ಕಡಿಮೆ.

Leave a Comment

Leave a Reply

Your email address will not be published. Required fields are marked *

error: Content is protected !!