Anchor Aparna ; ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ – ಸ್ವಚ್ಛ ಕನ್ನಡದ ಮಾತಿನ ಮಲ್ಲಿ ಇನ್ನು ನೆನಪು ಮಾತ್ರ

IMG 20240711 WA0220
Spread the love

ನ್ಯೂಸ್ ಆ್ಯರೋ‌ : ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ, ನಟಿ ಅಪರ್ಣ ನಿಧನರಾಗಿದ್ದಾರೆ. ಮಹಾಮಾರಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು.

90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರಮವೊಂದನ್ನು ಎಂಟು ಗಂಟೆಗಳ ಕಾಲ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದ ಅಪರ್ಣಾ ರಿಯಾಲಿಟಿ ಶೋಗಳಲ್ಲೂ ಸೈ ಎನಿಸಿಕೊಂಡಿದ್ರು. ಇನ್ನು 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಹಾಸ್ಯ ನಟಿಯಾಗಿಯೂ ಜನರ ಮನಗೆದ್ದಿದ್ದರು.

Leave a Comment

Leave a Reply

Your email address will not be published. Required fields are marked *

error: Content is protected !!