Divya Vasantha Arrested ; ಸ್ಪಾ ಮಾಲಕನಿಗೆ ಬ್ಲಾಕ್ಮೇಲ್, ಸುಲಿಗೆ ಪ್ರಕರಣ – ಟಿವಿ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ

20240711 131142
Spread the love

ನ್ಯೂಸ್ ಆ್ಯರೋ : ನೌಟಂಕಿ ಮಾತುಗಳಿಂದಲೇ ವೈರಲ್‌ ಆಗಿದ್ದ ಖಾಸಗಿ‌ ಚಾನೆಲ್ ವೊಂದರ ಮಾಜಿ ನಿರೂಪಕಿ, ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತಳನ್ನು ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಬೆಂಗಳೂರಿನ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಕೇಸ್‌ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದಳು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್‌ ಕಾರ್ಯನಿರ್ವಾಹಕ ಎಂದು ಗುರುತಿಸಿಕೊಂಡಿದ್ದ ರಾಜಾನುಕುಂಟೆ ವೆಂಕಟೇಶ್, ದಿವ್ಯ ತಮ್ಮ ಸಂದೇಶ್ ಸೇರಿ ಮೂವರನ್ನು ಈಗಾಗಲೇ ಬಂಧಿಸಿದ್ದಾರೆ.

ಈ ಪ್ರಕರಣ ಹೊರ ಬರುತ್ತಿದ್ದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇಂದಿರಾ ನಗರದ 80 ಅಡಿ ರಸ್ತೆಯ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು ಸುಲಿಗೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ರಾಜ್ ನ್ಯೂಸ್‌ ಸಿಇಒ ವೆಂಕಟೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಎರಡೂ ಪ್ರಕರಣಗಳು ಇಂದಿರಾಗರದಲ್ಲಿ ನಡೆದಿದೆ.

Leave a Comment

Leave a Reply

Your email address will not be published. Required fields are marked *