Karkala : ಹಿಂದೂ ಯುವತಿಯ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಬಂಧನ – NDPS ಪ್ರಕರಣದಲ್ಲಿ ಅಭಯ್ ಕಾರ್ಕಳ ಅಂದರ್ : ಎಸ್ಪಿ ಮಾಹಿತಿ

20240826 090909
Spread the love

ನ್ಯೂಸ್ ಆ್ಯರೋ : ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿ ಅಭಯ್ ಎ1 ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಕೃತ್ಯ ಎಸಗಿದ ಮೇಲೆ ಆರೋಪಿ ಅಲ್ತಾಫ್ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ಪೋಲಿಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ‌‌.

ಈ ಬಗ್ಗೆ ಮಾಹಿತಿ ನೀಡಿರುವ ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಅವರು, ಆರೋಪಿ ಅಭಯ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

ಇದೇ ರೀತಿಯಲ್ಲಿ NDPS ಪ್ರಕರಣದಲ್ಲಿ ಅಭಯ್ ನನ್ನು ಬಂಧಿಸಲಾಗಿದೆ. ಅಲ್ಲದೆ ಇನ್ನು ಎರಡು ಸಂಶಯಿತ ವ್ಯಕ್ತಿಗಳನ್ನು ವಶಪಡಿಸಿಕೊಂಡಿರುತ್ತೇವೆ. ಅವರುಗಳನ್ನು ತನಿಖೆ ನಡೆಸಿ ಅವರುಗಳ ಪಾತ್ರದ ಬಗ್ಗೆ ತನಿಖೆ ನಡೆಸಿ, ಆದಷ್ಟು ಬೇಗನೆ ಪ್ರಕರಣವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!