ರಾಜ್ಯದಲ್ಲಿ ಹಗರಣಗಳ ಸುದ್ದಿಯ ನಡುವೆ ಮತ್ತೊಬ್ಬ ರಾಜಕಾರಣಿ ಬಂಧನ – 47 ಕೋಟಿ ಹಗರಣ ಆರೋಪದಡಿ ಮಾಜಿ ಬಿಜೆಪಿ ಶಾಸಕ ಸಿಐಡಿ ವಶಕ್ಕೆ..!!
ನ್ಯೂಸ್ ಆ್ಯರೋ : ರಾಜ್ಯದಲ್ಲಿ ಹಗರಣಗಳ ಸದ್ದು ಜೋರಾಗಿದ್ದು, ಮುಡಾ, ವಾಲ್ಮೀಕಿ ನಿಗಮ ಹಗರಣದ ಸುದ್ದಿಯ ನಡುವೆಯೇ ಇದೀಗ ಮತ್ತೊಂದು ಹಗರಣ ಮುನ್ನೆಲೆಗೆ ಬಂದಿದ್ದು, ಬಿಜೆಪಿಯ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಮೈಸೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದ ಆರೋಪದಡಿ ಈಗ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
2021-23 ನಡುವೆ ಅವರು ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಪ್ರಸ್ತುತದ ಅರಸು ಟ್ರಕ್ ಟರ್ಮಿನಲ್ ನಿರ್ದೇಶಕ ವ್ಯವಸ್ಥಾಪಕರು 2023ರ ಸೆ.23ರಂದು ನೀಡಿದ್ದ ದೂರಿನ್ವಯ ತನಿಖೆ ಕೈಗೊಂಡ ಸಿಐಡಿ, ಇದೀಗ ವೀರಯ್ಯ ಅವರನ್ನು ಬಂಧಿಸಿದೆ.
ಏನಿದು ಪ್ರಕರಣ?
2021ರ ಅಕ್ಟೋಬರ್ 25ರಂದು ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 194ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಟ್ರಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆಗೆ 10 ಕೋಟಿ ರೂ.ಗಳವರೆಗೆ ತುಂಡು ಗುತ್ತಿಗೆ ನೀಡಲು ಅನುಮೋದನಾ ನಿರ್ಣಯ ಮಾಡಲಾಗಿತ್ತು. ಆನಂತರ ಕಾಮಗಾರಿ ನಡೆಸದೆ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ನಿಗಮದ ಹಾಲಿ ಎಂಡಿ, ಬಳಿಕ ವಿಲ್ಸನ್ ಗಾರ್ಡನ್ ಠಾಣೆಗೆ ತುಂಡು ಗುತ್ತಿಗೆ ಕಾಮಗಾರಿಯಲ್ಲಿ 47.10 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು.
Leave a Comment