ಮುಡಾ ಆಯ್ತು, ಈಗ ಮತ್ತೊಂದು ಹಗರಣ..! ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ

20240906 174027
Spread the love

ನ್ಯೂಸ್ ಆ್ಯರೋ : ಸದ್ಯ ರಾಜ್ಯ ರಾಜಕಾರಣದಲ್ಲಿ ವಾಲ್ಮೀಕಿ, ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು, ಆರೋಪ ಪ್ರತ್ಯಾರೋಪದ ನಡುವೆಯೇ ನ್ಯಾಯಾಲಯದಲ್ಲಿ ತನಿಖೆ ನಡೆಯುತ್ತಿದೆ.

ಈ ಹಗರಣವೂ ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ತಂದಿಟ್ಟರೆ, ಈ ಮಧ್ಯೆ ಕೇಳುತ್ತಿರುವ ಇನ್ನೊಂದು ಹಗರಣ ಬಿಜೆಪಿಗೆ ಬಿಗ್ ಶಾಕ್ ನೀಡುತ್ತಿದೆ. ಈ ಹಗರಣದ ಸುದ್ದಿಯು ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ.

ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಜೊತೆಗೆ ಈ ಹಗರಣದ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇವರು, 2011 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿದೆ. 100 ರೂಪಾಯಿ ಬೆಲೆಯ 10 ಲಕ್ಷ ಸೀರೆಗಳನ್ನು ಸೂರತ್ ನಿಂದ ಹೆಚ್ಚಿನ ಬೆಲೆ ನೀಡಿ ಸುಮಾರು ತರಿಸಲಾಗಿತ್ತು. ಮೋಟಮ್ಮ ಅವರು ವಿರೋಧ ಪಕ್ಷದ ನಾಯಕರಾಗಿ ಇದ್ದ ಸಂದರ್ಭದಲ್ಲಿ ಈ ವಿಷಯದ ಕುರಿತು ವಿಧಾನ ಪರಿಷತ್ ನಲ್ಲಿ ಚರ್ಚೆಯಾಗಿದೆ.

ಈಗಾಗಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಗರಣ ಹಾಗೂ ಮುಡಾ ಹಗರಣ ವಿಪಕ್ಷಗಳಿಗೆ ಪ್ರಮುಖ ಅಸ್ತ್ರವಾಗಿತ್ತು. ಇದೀಗ ಬಿಜೆಪಿ ವಿರುದ್ಧವೇ ಭಾಗ್ಯಲಕ್ಷ್ಮಿ ಯೋಜನೆ ಅಡಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ.

Leave a Comment

Leave a Reply

Your email address will not be published. Required fields are marked *