ಪುತ್ತೂರು : ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ – ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆತಂದ ಪೋಲಿಸರು..!

20240902 124902
Spread the love

ನ್ಯೂಸ್ ಆ್ಯರೋ : ಪುತ್ತಿಲ ಪರಿವಾರ ಸಂಘಟನೆಯ ಸಂಸ್ಥಾಪಕ, ಬಿಜೆಪಿಯ ಮುಖಂಡ, ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ನಂಬಿಕೆ ದ್ರೋಹ, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯ ದೈಹಿಕ ತಪಾಸಣೆ ಹಾಗೂ ವೈದ್ಯಕೀಯ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿದೆ.

ಪುತ್ತೂರು ತಾಲೂಕಿನ ಸಾಮೆತ್ತಡ್ಕದ ನಿವಾಸಿ 47 ವರ್ಷದ ಮಹಿಳೆಯೊಬ್ಬರು ದೂರು ನೀಡಿದ ಸಂತ್ರಸ್ತೆಯಾಗಿದ್ದು, ಅವರನ್ನು ಪುತ್ತೂರು ಮಹಿಳಾ ಠಾಣಾ ಪೋಲಿಸರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.

ಮಹಿಳೆಯ ದೂರು ಏನು?
ಕಳೆದ ವರ್ಷ 2023ರ ಜೂನ್ ತಿಂಗಳಲ್ಲಿ ಬೆಂಗಳೂರಿನ PAI VISTA ಹೋಟೆಲ್ ಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದರು. ಆ ಬಳಿಕ ಬ್ಲಾಕ್ ಮೇಲ್ ಮಾಡಿಕೊಂಡು ಅವರಿರುವ ಪ್ರದೇಶಕ್ಕೆ ಕರೆಸಿಕೊಳ್ಳುತ್ತಿದ್ದರು ಎಂದು ಮಹಿಳೆ ದೂರಿದ್ದಾರೆ. ತನಗೆ ಹಾಗೂ ತನ್ನ ಪುತ್ರಿಗೆ ಜೀವನ ಪೂರ್ತಿ ಯಾವುದೇ ಕುಂದು ಕೊರತೆಯಾಗದಂತೆ ನೋಡಿಕೊಳ್ಳುವುದಾಗಿ ನಂಬಿಸಿ ನನ್ನನ್ನು ದೈಹಿಕ ಹಾಗೂ ಮಾನಸಿಕವಾಗಿ ಬಳಸಿಕೊಳ್ಳುತ್ತಿದ್ದರು.

20240902 1249553157614651673310430

ಅವರೊಂದಿಗೆ ಇದ್ದ ಕ್ಷಣಗಳ ಛಾಯಾ ಚಿತ್ರ, ಸೆಲ್ಫಿ, ಆಡಿಯೋ, ವಿಡಿಯೋಗಳು ಇದೆಯೆಂದು ಹೇಳಿಕೊಂಡು ಬೆದರಿಸಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದರು ಎಂದು ಸಂತ್ರಸ್ತೆ‌ ಎನ್ನಲಾದ ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ‌

ಆದರೆ 2024ರ ಲೋಕಸಭಾ ಚುನಾವಣೆಯ ಬಳಿಕ ಮಾತುಕತೆ ಕಡಿಮೆ ಮಾಡಿದ್ದು, ಭಯಗೊಂಡು ನಾನು ಪುತ್ತೂರಿಗೆ ವಾಸ ಬದಲಾವಣೆ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಉದ್ಯೋಗ ಹಾಗೂ ವರಮಾನವಿಲ್ಲದೆ ಬಾಡಿಗೆ ಮನೆಯಲ್ಲಿದ್ದುಕೊಂಡು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

20240902 1250386141940389242994892

ಸದ್ಯ ಪ್ರಕರಣದ ಸಂತ್ರಸ್ತೆ ಸಾಮೆತ್ತಡ್ಕ ನಿವಾಸಿ 47 ವರ್ಷದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಅ.ಕ್ರ.45/2024 ರಂತೆ IPC 1860 (U/s-417,354(a), 506 ಸೆಕ್ಷನ್ ನ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಸದ್ಯದ ಮಾಹಿತಿ ‌:

ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆ ಆರಂಭಿಸುವುದಾಗಿ ಅರುಣ್ ಕುಮಾರ್ ಪುತ್ತಿಲ ಪುನರುಚ್ಚರಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *