ಮೆಟ್ರೋ ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್; ಸದ್ಯದಲ್ಲೇ ಟಿಕೆಟ್ ದರ ಏರಿಕೆ ?
ನ್ಯೂಸ್ ಆ್ಯರೋ: ಬೆಂಗಳೂರು ಜನರಿಗೆ ಮತ್ತೊಂದು ದರ ಏರಿಕೆಯ ಶಾಕ್ ಸದ್ಯದಲ್ಲೇ ತಟ್ಟಲಿದೆ. ಈಗಾಗಲೇ ಹಲವು ಬಾರಿ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್‌ಸಿಎಲ್ ಪ್ಲಾನ್ ಮಾಡಿತ್ತು, ಏಳು ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿರಲಿಲ್ಲ.
ಸದ್ಯ 15 ರಿಂದ 20% ಟಿಕೆಟ್ ದರ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಟಿಕೆಟ್ ದರ ಏರಿಕೆಗೆ ನಮ್ಮ ಮೆಟ್ರೋ.’ದಿ ಫೇರ್ ಪಿಕ್ಸೇಷನ್ ಕಮಿಟಿ’ (ಎಫ್‌ಎಫ್‌ಸಿ) ರಚನೆ ಮಾಡಿದೆ.
ಇದೊಂದು ಸ್ವಾತಂತ್ರ ಕಮಿಟಿಯಾಗಿದ್ದು,ಪ್ರಯಾಣಿಕರ ಸಲಹೆ ಪಡೆದು ಟಿಕೆಟ್ ದರ ಏರಿಕೆಗೆ ಈ ಕಮಿಟಿ ಮುಂದಾಗಲಿದ್ದು, ಅ.21 ರೊಳಗೆ ಪ್ರಯಾಣಿಕರು ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ನೀಡಲಾಗಿದೆ. ಪ್ರಯಾಣಿಕರ ಸಲಹೆಯನ್ನffc@bmrc.co.in ಗೆ ಕಳಿಸುವಂತೆ ಸೂಚನೆ ನೀಡಲಾಗಿದೆ.
2017ರ ನಂತರ ಇದೀಗ ಮೆಟ್ರೋ ದರ ಏರಿಕೆಗೆ ತೀರ್ಮಾನ ಮಾಡಿದೆ. ಎಷ್ಟು ದರ ಏರಿಕೆ ಮಾಡಬೇಕೆಂದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಸಾರ್ವಜನಿಕರನೊಳಗೊಂಡ ಕಮಿಟಿ ರಚನೆ ಮಾಡಿದ್ದು, ಈ ಬಗ್ಗೆ ಅಧಿಕೃತವಾಗಿ ಬಿಎಂಆರ್‌ಸಿಎಲ್ ಜಾಹೀರಾತು ನೀಡಿದೆ.
ಈಗಾಗಲೇ ನಮ್ಮ ಮೆಟ್ರೋದ ಟಿಕೆಟ್ ದರ ಕನಿಷ್ಠ ದರ 10 ರೂ ಆಗಿದ್ದು, ಗರಿಷ್ಠ ದರ 60 ರೂ. ವರೆಗೆ ಇದೆ. ಈಗ 15 ರಿಂದ 20 ರಷ್ಟು ಟಿಕೆಟ್ ದರ ಏರಿಕೆ ಆಗಲಿದೆಯಂತೆ. ಮುಂದಿನ ತಿಂಗಳಿಂದ ಹೊಸ ದರ ಜಾರಿ ಆಗುವ ಸಾಧ್ಯತೆಯಿದೆ.
Leave a Comment