ಅತುಲ್​ ಸುಭಾಷ್​ ಆತ್ಮಹತ್ಯೆ: ಟೆಕ್ಕಿಯ ಪತ್ನಿ, ಅತ್ತೆ ಮತ್ತು ಭಾಮೈದ ಅರೆಸ್ಟ್​

Atul Fam
Spread the love

ಬೆಂಗಳೂರು: ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅತುಲ್ ಪತ್ನಿ, ಎ1 ನಿಖಿತಾ ಸಿಂಘಾನಿಯ, ಆತುಲ್​ ಅತ್ತೆ, ಎ2 ನಿಶಾ ಸಿಂಘಾನಿಯಾ, ಭಾಮೈದ ಎ3 ಅನುರಾಗ್​ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.

ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್​ನಲ್ಲಿ ನಿಶಾ ಹಾಗೂ ಅನುರಾಗ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂವರನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪತಿ ಆತ್ಮಹತ್ಯೆ ಬಳಿಕ ನಿಖಿತಾ ಪರಾರಿಯಾಗಿದ್ದರು. ಹುಡುಕಾಟ ಆರಂಭಿಸಿದ್ದ ಮಾರತ್ತಹಳ್ಳಿ ಪೊಲೀಸರು ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದರು.

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮಾರತ್ತಹಳ್ಳಿ ಪೊಲೀಸರಿಗೆ ಹಲವು ವಿಚಾರಗಳು ಗೊತ್ತಾಗಿವೆ. ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಳ್ಳಲು 15 ದಿನಗಳ ಹಿಂದೆಯೇ ನಿರ್ಧರಿಸಿದ್ದರು. ಆತ್ಮಹತ್ಯೆಗೂ ಮುನ್ನ ಮೂರು ದಿನದ ಹಿಂದೆ ಡೆತ್ ನೋಟ್ ಬರೆದಿಟ್ಟಿದ್ದರು. ಅಲ್ಲದೇ, ಕಾನೂನಿನ ವಿಚಾರಗಳ ಬಗ್ಗೆ ಗೂಗಲ್​​ನಲ್ಲಿ ಸರ್ಚ್ ಮಾಡಿದ್ದರು ಎಂದು ಪೊಲೀಸರು ತನಿಖೆಯಲ್ಲಿ ಕಂಡುಕೊಂಡಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!