Bharath Bandh : ಸಾರ್ವಜನಿಕರೇ ಗಮನಿಸಿ.. ಆಗಸ್ಟ್ 21ರಂದು ಭಾರತ್ ಬಂದ್ ಗೆ ಕರೆ – ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ
ನ್ಯೂಸ್ ಆ್ಯರೋ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ (Supreme Court SC ST Quota, SC ST Sub- Classifications) ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಇದನ್ನು ವಿರೋಧಿಸಿ ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಆಗಸ್ಟ್ 21ರ ಬುಧವಾರ ಭಾರತ್ ಬಂದ್‌ಗೆ ಕರೆ ನೀಡಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ.
ಆದರೆ ಅವಶ್ಯಕತೆ ಇದ್ದವರಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟು ಮೀಸಲಾತಿ ನೀಡಬೇಕೆಂದು ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ವಾದವಾಗಿದೆ. ಹಾಗಾಗಿ ಸುಪ್ರೀಂ ಕೋರ್ಟ್ ತನ್ನ ಆದೇಶ ಹಿಂಪಡೆದು, ತಮ್ಮ ಬೇಡಿಕೆ ಈಡೇರಿಸುವಂತೆ ಭಾರತ್ ಬಂದ್ ವೇಳೆ ಪ್ರತಿಭಟನಾಕಾರರು ಒತ್ತಾಯಿಸಲಿದ್ದಾರೆ.
ಬಹುಪಾಲು ಬಂದ್ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗಳಂತಹ ತುರ್ತು ಸೇವೆಗಳು ಕಾರ್ಯನಿರ್ವಹಿಸುತ್ತಲೇ ಇರುತ್ತವೆ. ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಆದಾಗ್ಯೂ, ಸಾರ್ವಜನಿಕ ಸಾರಿಗೆಯನ್ನು, ಖಾಸಗಿ ಕಚೇರಿಗಳು, ಅಂಗಡಿ ಮುಗ್ಗಟ್ಟು ಬಂದ್ ಆಗಲಿವೆ. ಇನ್ನು ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅನೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.
ಭಾರತ್ ಬಂದ್‌ಗೆ ಸಿದ್ಧತೆ ಮತ್ತು ಭದ್ರತಾ ಕ್ರಮ
ಬಂದ್ ವೇಳೆ ಸಂಭವನೀಯ ಹಿಂಸಾಚಾರದ ಹಿನ್ನೆಲೆಯಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಿದ್ಧತೆಗಾಗಿ ಸಭೆ ನಡೆಸಿದ್ದಾರೆ. ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಧಾನ ಕಾರ್ಯದರ್ಶಿ ಗೃಹ ಮತ್ತು ಪೊಲೀಸ್ ಮಹಾನಿರ್ದೇಶಕರು(ಡಿಜಿಪಿ) ಸಭೆಯ ಅಧ್ಯಕ್ಷತೆ ವಹಿಸಿದ್ದರು. ಆಗಸ್ಟ್ 21 ರಂದು ನಡೆಯಲಿರುವ ಪ್ರತಿಭಟನೆ ವೇಳೆ ಅಗತ್ಯ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
Leave a Comment