ನ್ಯೂಸ್ ಆ್ಯರೋ : ರಸ್ತೆಯ ವಿರುದ್ಧ ದಿಕ್ಕಿನಲ್ಲಿ (ರಾಂಗ್ ಸೈಡ್) ವಾಹನ ಚಾಲನೆ ವಿರುದ್ಧ ಸಮರ ಸಾರಿರುವ ರಾಜ್ಯ ಪೋಲಿಸರು ಆಗಸ್ಟ್ 1ರಿಂದ ಇಂದಿನವರೆಗೆ 12 ಸಾವಿರಕ್ಕೂ ಅಧಿಕ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಿರುವುದಾಗಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್‌ಕುಮಾರ್ ಮಾಹಿತಿ ನೀಡಿದ್ದಾರೆ. ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ
ಸಕಲೇಶಪುರ-ಬಾಳ್ಳುಪೇಟೆ ರೈಲ್ವೆ ಹಳಿ ಮೇಲಿನ ಭೂಕುಸಿತದ ಮಣ್ಣು ತೆರವು – ನಾಳೆಯಿಂದ ರೈಲು ಸಂಚಾರ ಪುನರಾರಂಭ : ರೈಲುಗಳ ವಿವರ ಇಲ್ಲಿದೆ..
ನ್ಯೂಸ್ ಆ್ಯರೋ : ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆಯೇ ಮಳೆಯಿಂದಾಗಿ ಭೂಕುಸಿತಗೊಂಡು ಕುಸಿದಿದ್ದ ಮಣ್ಣನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದ್ದು, ನಾಳೆಯಿಂದ ಈ ಮಾರ್ಗದಲ್ಲಿ ಕೆಲ ರೈಲುಗಳ ಸಂಚಾರ ಪುನರಾರಂಭವಾಗಲಿದೆ. ರೈಲು ಸಂಚಾರದ ಬಗ್ಗೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಪುನಃಸ್ಥಾಪನೆ ಕಾರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾಯಕಾರಿ ಸೇತುವೆಗಳ ಕುಸಿತ ಭೀತಿ – ತಾಂತ್ರಿಕ ಸಮಿತಿಯಿಂದ ಸೇತುವೆಗಳ ಪರಿಶೀಲನೆ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರಕ್ಕೆ ಅಪಾಯ ಇರುವ ಸೇತುವೆಗಳ ಪರಿಶೀಲನೆಗೆ ತಾಂತ್ರಿಕ ತಜ್ಞರ ಸಮಿತಿ ಸೋಮವಾರ ಜಿಲ್ಲೆಗೆ ಆಗಮಿಸಿ ಪರಿಶೀಲಿಸಿತು. ಪೊಳಲಿ, ಉಳಾಯಿಬೆಟ್ಟು ಮತ್ತು ಬಳ್ಕುಂಜೆಗೆ ಭೇಟಿ ನೀಡಿದ ತಾಂತ್ರಿಕ ತಜ್ಞ ತಂಡ ಅಲ್ಲಿನ ಸೇತುವೆಗಳನ್ನು ಖುದ್ದು ವೀಕ್ಷಿಸಿತು. ದೋಣಿಯಲ್ಲಿ ತೆರಳಿ ಸೇತುವೆಯ ಅಡಿಭಾಗಕ್ಕೂ ಭೇಟಿ ನೀಡಿ ವೀಕ್ಷಣೆ ನಡೆಸಿತು. ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಸ್ಥಳೀಯರೊಂದಿಗೂ ಮಾಹಿತಿ
ಮುಡಾ ಹಗರಣದಲ್ಲಿ ಸಿಎಂ ಗೆ ತಪ್ಪದ ಸಂಕಷ್ಟ – ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ನ್ಯೂಸ್ ಆ್ಯರೋ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸ
ಉಡುಪಿ : ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಹಿನ್ನೆಲೆ – ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ, ಶಾಂತಿಯುತ ಪ್ರತಿಭಟನೆ : ಪ್ರತಿಭಟನೆ ವೇಳೆ ರಾಜ್ಯಪಾಲರಿಗೆ ಧಿಕ್ಕಾರ ಕೂಗಿದ ಕಾರ್ಯಕರ್ತರು
ನ್ಯೂಸ್ ಆ್ಯರೋ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ನಿಂದ ಉಡುಪಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯಪಾಲರ ನಡೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ ಕೈ ಕಾರ್ಯಕರ್ತರು, ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಭಿತ್ತಿಪತ್ರ ಪ್ರದರ್ಶಿಸಿ ಅಸಮಾಧಾನ ವ್ಯಕ್ತಪಡಿಸಿದರು. ಉಡುಪಿಯ ಪ್ರಮುಖ ರಸ್ತೆಗಳಲ್ಲಿ ನೂರಾರು ಜನರ ಪಾದಯಾತ್ರೆ ನಡೆದಿದ್ದು, ಮಾಜ