ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಗದ್ದೆ, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹದ ಭೀತಿ ಶುರುವಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಜಿಲ
ಕುಂದಾಪುರ : ಪತ್ನಿ, ತಾಯಿ ಕಣ್ಣೆದುರೇ ವಾರಾಹಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ – ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಸಂಗಮ ನದಿ ತೀರದಲ್ಲಿ ಪತ್ತೆ
ನ್ಯೂಸ್ ಆ್ಯರೋ : ಕುಂದಾಪುರ ಸಮೀಪದ ಕಂಡ್ಲೂರು ಸಮೀಪದ ಸೇತುವೆಯಿಂದ ಮಂಗಳವಾರ ಅಪರಾಹ್ನ ವಾರಾಹಿ ನದಿಗೆ ಹಾರಿ, ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ಹರೀಶ್ ಕಾಳಾವರ ಅವರ ಮೃತದೇಹ ಇಂದು ಅಪರಾಹ್ನ 2:30ರ ವೇಳೆ ಕುಂದಾಪುರ ಸಂಗಮದ ಸಮೀಪ ನದಿ ತೀರದಲ್ಲಿ ಪತ್ತೆಯಾಗಿದೆ. ಕಂಡ್ಲೂರು ಠಾಣಾ ಎಸ್‌ಐ ನೂತನ್ ಹಾಗೂ ಸಿಬಂದಿ ಹುಡುಕಾಟ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ಕುಂದಾಪುರದ ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳೀಯ ಶೌರ್ಯ ತಂಡದ ಸದ
ಉಡುಪಿ ; ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ವನಮಹೋತ್ಸವ ಕಾರ್ಯಕ್ರಮ
ನ್ಯೂಸ್ ಆ್ಯರೋ : ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ನಿತ್ಯ ಈ ಬಗ್ಗೆ ಜಾಗೃತಿ ವಹಿಸುವುದು ಅತೀ ಅವಶ್ಯವಾಗಿದೆ. ಇಲ್ಲವಾದರೆ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕರಾದ ವಂ| ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಅವರು ಬುಧವಾರ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಶಿರ್ವ ವಲಯ, ಘಟಕ ಹಾಗೂ ಮಟ್ಟಾರು
ಮಣಿಪಾಲದ MAHE ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿ ಡಾ.ವಲಿಯತ್ತನ್ ನಿಧನ – ಪದ್ಮವಿಭೂಷಣ ಸೇರಿದಂತೆ ಜಗತ್ತಿನ ಹಲವು ಗರಿ ಪಡೆದಿದ್ದ ಸಾಧಕ ಇನ್ನಿಲ್ಲ
ನ್ಯೂಸ್ ಆ್ಯರೋ : ಪದ್ಮ ವಿಭೂಷಣ ಪ್ರೊ. ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ (ಎಂ ಎಸ್ ವಲಿಯಥಾನ್) ನಿಧನರಾಗಿದ್ದಾರೆ. ಮಣಿಪಾಲದ MAHE ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿ ಡಾ.ವಲಿಯತ್ತನ್ ಅವರು ತಮ್ಮ 90ನೇ ವಯಸ್ಸಿನಲ್ಲಿ ಮಣಿಪಾಲದಲ್ಲಿ ಬುಧವಾರ ರಾತ್ರಿ 9:14 ಕ್ಕೆ ನಿಧನರಾಗಿದ್ದಾರೆ. ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ವಲಿಯಾಥನ್ ಅವರು ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ಗಮನಾರ್ಹ ಕೊಡುಗೆ ನೀಡಿದ್ದ
NH75 : ಸಕಲೇಶಪುರ ಬಳಿಯ ದೊಡ್ಡತಪ್ಪಲು, ಹೆಗ್ಗದ್ದೆ ಬಳಿ ಗುಡ್ಡ ಕುಸಿತ – ಶಿರಾಡಿ ಘಾಟ್ ವಾಹನ ಸಂಚಾರ ಬಂದ್ : ಅಲ್ಲಲ್ಲಿ ಬದಲಿ ಸಂಚಾರಕ್ಕೆ ವ್ಯವಸ್ಥೆ
ನ್ಯೂಸ್ ಆ್ಯರೋ : ಅವೈಜ್ಞಾನಿಕ ರಸ್ತೆ ಕಾಮಗಾರಿಯ ಹಿನ್ನೆಲೆಯಲ್ಲಿ ಭೂಕುಸಿತ ಉಂಟಾಗಿದ್ದು ಮಂಗಳೂರು-ಬೆಂಗಳೂರು ರಸ್ತೆಯ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಗುಡ್ಡ ಕುಸಿತದಿಂದಾಗಿ ಹೆದ್ದಾರಿ 75 ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಆಗಿದೆ. ಸಕಲೇಶಪುರದ ಹೈವೇ ಜಂಕ್ಷನ್ ಬಳಿ ವಾಹನಗಳು ಸಾಲಾಗಿ ನಿಂತಿದ್ದು, ಹಾಸನದವರೆಗೂ ವಾಹನ ದಟ್ಟಣೆ ಕಂಡುಬರುತ್ತಿದೆ. ಘನ ವಾಹನಗಳ ಮಧ್ಯೆ