ನ್ಯೂಸ್ ಆ್ಯರೋ : ಈ ಬಾರಿಯ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅದರಲ್ಲೂ ಮುಖ್ಯವಾಗಿ ಕುಂದಾಪುರ ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶನಿವಾರ (ಜುಲೈ 6) ರಜೆ ಘೋಷಣೆ ಮಾಡಲಾಗಿದೆ.
ಬಂಟ್ವಾಳ : ಎಣ್ಮೂರು ಗರಡಿ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣ – ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ..!
ನ್ಯೂಸ್ ಆ್ಯರೋ : ಕುಕ್ಕಿಪಾಡಿಯ ರಿಕ್ಷಾ ಚಾಲಕ, ಎಣ್ಮೂರು ನಾಗಬ್ರಹ್ಮ ದೈವಸ್ಥಾನದ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಅವರ ಮೃತದೇಹವು ಬಂಟ್ವಾಳ ಸಮೀಪ ಪತ್ತೆಯಾಗಿದೆ. ಆಟೋ ಚಾಲಕರಾಗಿರುವ ಗಿರೀಶ್ ಅವರು ಕಳೆದ ಬುಧವಾರ ತಡರಾತ್ರಿ 2 ಗಂಟೆ ವೇಳೆಗೆ ಮನೆಯಿಂದ ಆಟೋ ಸಹಿತ ತೆರಳಿದವರು ಬಳಿಕ ನಾಪತ್ತೆಯಾಗಿದ್ದರು. ಪೂಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ನಾಪತ್ತೆ ಪ್ರಕರಣ ದಾಖಲಾಗಿ
Bangalore : ಕೈತುಂಬಾ ಸಂಬಳ ಪಡೆಯುತ್ತಿದ್ದ ಮಹಿಳಾ ಟೆಕ್ಕಿ ಆತ್ಮಹತ್ಯೆ – ಗಂಡನನ್ನು ವಶಕ್ಕೆ ಪಡೆದ ಪೋಲಿಸರು, ಸಾವಿಗೆ ಕಾರಣ ಬಯಲು
ನ್ಯೂಸ್ ಆ್ಯರೋ : ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿಯೊಬ್ಬರು (Techie) ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆ ಶರಣಾದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂಜಾ ಮೂಲತಃ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತೆಗ್ಗಿ ಬಸಾಪುರ ಮೂಲದವರು. 2022ರಲ್ಲಿ ಸುನೀಲ್ ಎಂಬುವವರ ಜತೆಗೆ ಪೂಜಾಳ ವಿವಾಹವಾಗಿತ್ತು. ಆದರೆ ಪತಿ
ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್ ಆನಂದ ವರ್ಗಾವಣೆ – ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್
ನ್ಯೂಸ್ ಆ್ಯರೋ : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಸಿ ಎಲ್ ಆನಂದ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಗೊಳಿಸಿದೆ. ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಸಿ.ಎಲ್ ಆನಂದ ಅವರಿಗೆ ಆದೇಶದಲ್ಲಿ ಯಾವುದೇ ಸ್ಥಾನ ತೋರಿಸಿಲ್ಲ.
ಜಗತ್ತಿನಲ್ಲೇ ಮೊತ್ತಮೊದಲ ಕೇಸ್ – ಆತ್ಮಹತ್ಯೆ ಮಾಡಿಕೊಂಡ ರೋಬೋಟ್..!! ಕಾರಣ ಏನು?
ನ್ಯೂಸ್ ಆ್ಯರೋ : ಸಾರ್ವಜನಿಕ ಬದುಕಿನ ಜಂಜಾಟ, ಸಾಂಸಾರಿಕ ಸಮಸ್ಯೆ, ಆರ್ಥಿಕ ಸಮಸ್ಯೆಗಳಿಂದಲೋ ಲವ್ ಫೈಲ್ಯೂರ್ ನಿಂದಲೋ ಜೀವನದ ಮೇಲೆ ಆಸಕ್ತಿ ಕಳೆದುಕೊಂಡವರು ಆತ್ಮಹತ್ಯೆಗೆ ಶರಣಾಗೋದು ಮಾಮೂಲಿ. ಆದರೆ ಜಗತ್ತಿನಲ್ಲೇ ಮೊತ್ತ ಮೊದಲ ಬಾರಿಗೆ ರೋಬೋಟ್ ಒಂದು ಆತ್ಮಹತ್ಯೆಗೆ ಶರಣಾದ ಬಗ್ಗೆ ವರದಿಯಾಗಿದೆ. ಮಧ್ಯ ದಕ್ಷಿಣ ಕೊರಿಯಾದ ಪುರಸಭೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಬೋಟ್ ಮೆಟ್ಟಿಲುಗಳ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದೆ