ನ್ಯೂಸ್ ಆ್ಯರೋ : ಗೋಬಿ ಮಂಚೂರಿ ಹಾಗೂ ಕಬಾಬ್ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ ಬ್ಯಾನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಚಿಕನ್ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು
News Arrow IMPACT : ಪರ್ಕಳದ ದುರ್ಗಾನಗರ ಕೆರೆ ನಾಲ್ಕನೇ ಬಾರಿ ಕುಸಿತ, ಉಡುಪಿ ಜಿಲ್ಲಾಧಿಕಾರಿ ದಿಢೀರ್ ಭೇಟಿ – 60 ಲಕ್ಷ ಕಾಮಗಾರಿಯ ಅಕ್ರಮದ ಬಗ್ಗೆ ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು..!!
ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯ ಪರ್ಕಳದ ದುರ್ಗಾ ನಗರದಲ್ಲಿರುವ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆಯಲ್ಲಿ ನಿರ್ಮಾಣವಾಗುತ್ತಿರುವ ಕೆರೆ ಈ ಬಾರಿಯೂ ಮೊದಲ ಮಳೆಗೇ ಕುಸಿದಿದ್ದು, ಘಟನೆಯ ಬಳಿಕ ಉಡುಪಿಯ ಜಿಲ್ಲಾಧಿಕಾರಿ ವಿದ್ಯಾ ಕುಮಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಣ್ಣ ನೀರಾವರಿ ಇಲಾಖೆಯಿಂದ ಬಹುಕೋಟಿ ಅನುದಾನದಿಂದ ನಿರ್ಮಾಣವಾದ ಕೆರೆದಂಡೆ ನಾಲ್ಕನೇ ಬಾರಿಯೂ ಕುಸಿಯುತ್ತಿರುವುದು ಅವೈಜ್ಞಾನಿಕವಾದ
ಅಂತರಾಷ್ಟ್ರೀಯ T20 ಕ್ರಿಕೆಟ್ ಗೆ ರೋಹಿತ್ ಶರ್ಮಾ ವಿದಾಯ – ಕೊಹ್ಲಿ ನಿವೃತ್ತಿ ಬೆನ್ನಲ್ಲೇ ವಿದಾಯದ ನಿರ್ಧಾರ ಪ್ರಕಟಿಸಿದ ‘ಹಿಟ್ ಮ್ಯಾನ್’..!!
ನ್ಯೂಸ್ ಆ್ಯರೋ : ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಆಲ್ರೌಂಡ್ ಪ್ರದರ್ಶನದ ಫಲವಾಗಿ ಭಾರತ ತಂಡವು ಗೆದ್ದು ಬೀಗಿದ್ದು, ಚುಟುಕು ವಿಶ್ವಸಮರದಲ್ಲಿ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರ ಬೆನ್ನಲ್ಲೇ ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವೀಕರಿಸುವ ವೇಳೆ T20 ಕ್ರಿಕೆಟ್ ಗೆ ವಿದಾಯ ಘೋಷಿಸುವ ಮೂಲಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ
CWC2024 : 13 ವರ್ಷಗಳ ಬಳಿಕ ವಿಶ್ವಕಪ್ ಗೆದ್ದ ಭಾರತ – ರೋಚಕ ಪಂದ್ಯದಲ್ಲಿ ಸೋಲು ಕಂಡ ದಕ್ಷಿಣ ಆಫ್ರಿಕಾ
ನ್ಯೂಸ್ ಆ್ಯರೋ : ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಬಹು ನಿರೀಕ್ಷಿತ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತ ತಂಡ 7 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ಐಸಿಸಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡವು ಬಲಿಷ್ಠ ಭಾರತದೆದುರು ಕೊನೆಯ ಎಸೆತದವರೆ
ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ – ಫೈನಲ್ ಪಂದ್ಯವೇ ನನ್ನ ಕೊನೆಯ ಪಂದ್ಯ ಎಂದ ಕಿಂಗ್…!!
ನ್ಯೂಸ್ ಆ್ಯರೋ : ಟಿಟ್ವೆಂಟಿ ವಿಶ್ವಕಪ್ ಟೀಂ ಇಂಡಿಯಾ ಪಾಲಾಗುತ್ತಲೇ ಕಿಂಗ್ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟಿ20 ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ. ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ತಾನು ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸುವುದಾಗಿ ಹೇಳಿದರು. ಇದು ನನ್ನ ಕೊನೆಯ ಟಿ20 ವಿಶ್ವಕಪ್, ಅಲ್ಲದೇ ಇದೇ ನನ್ನ ಕೊನೆಯ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ