ನೂತನ ಮುಖ್ಯಮಂತ್ರಿ ಸ್ವಾಗತಿಸಲು ಸಿದ್ಧವಾಯ್ತು ಹೊಸ ಕಾರು – ಇದರ ಬೆಲೆ ಎಷ್ಟು?

ನೂತನ ಮುಖ್ಯಮಂತ್ರಿ ಸ್ವಾಗತಿಸಲು ಸಿದ್ಧವಾಯ್ತು ಹೊಸ ಕಾರು – ಇದರ ಬೆಲೆ ಎಷ್ಟು?

ನ್ಯೂಸ್ ಆ್ಯರೋ‌ : ಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಮೂರ್ನಾಲ್ಕು ದಿನ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಎದುರಾಗಿತ್ತು. ಈಗ ಸಮಸ್ಯೆಗಳೆಲ್ಲ ಬಗೆಹರಿದು ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಮುಖ್ಯಮಂತ್ರಿಗಾಗಿ ಸರಕಾರ ಹೊಸ ಕಾರು ಖರೀದಿಸಿದೆ. ಅದರ ವಿವರ ಇಲ್ಲಿದೆ.

ಟೊಯೋಟೊ ವೆಲ್ಫೇರ್ ಕಾರನ್ನು ನೂತನ ಮುಖ್ಯಮಂತ್ರಿಗಾಗಿ ಖರೀದಿಸಲಾಗಿದ್ದು, ಇದರ ಬೆಲೆ ಬರೋಬ್ಬರಿ 1 ಕೋಟಿ ರೂ. ಎಂಬ ಮಾಹಿತಿ ಲಭ್ಯವಾಗಿದೆ.

ಮೂಲಗಳ ಪ್ರಕಾರ, ರಾಜ್ಯ ಸರಕಾರದ ಆಡಳಿತ ಮತ್ತು ಸುಧಾರಣ ಇಲಾಖೆಯಿಂದ ಕಾರನ್ನು ಖರೀದಿಸಲಾಗಿದೆ. ಇನ್ನು ಮುಂದೆ ಸಿದ್ದರಾಮಯ್ಯ ಈ ಹೊಸ ಕಾರಿನಲ್ಲೇ ಓಡಾಡಲಿದ್ದಾರೆ.

ನಾಳೆ(ಶನಿವಾರ) ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜಿಸಲಾಗಿದೆ. ಸಿದ್ದರಾಮಯ್ಯ 24ನೇ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *