ಇನ್ನು ಮುಂದೆ ಟ್ರಕ್ ಗಳಲ್ಲಿ ಎಸಿ ಕಡ್ಡಾಯ -ಕಾರಣವೇನು ಗೊತ್ತಾ?

ಇನ್ನು ಮುಂದೆ ಟ್ರಕ್ ಗಳಲ್ಲಿ ಎಸಿ ಕಡ್ಡಾಯ -ಕಾರಣವೇನು ಗೊತ್ತಾ?

ನ್ಯೂಸ್ ಆ್ಯರೋ‌ : ಕೇಂದ್ರ ಸರಕಾರ ಟ್ರಕ್ ಡ್ರೈವರ್ ಗಳಿಗೆ ಗುಡ್ ನ್ಯೂಸ್ ನೀಡಿದೆ. ಎಲ್ಲಾ ಟ್ರಕ್ ಗಳಲ್ಲಿ 2025ರಿಂದ ಎಸಿ ಕ್ಯಾಬಿನ್ ಕಡ್ಡಾಯವಾಗಿರಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಚಾಲಕರಿಗೆ ಅನುಕೂಲ

ಕೆಲವೊಮ್ಮೆ ಟ್ರಕ್ ಚಾಲಕರು ಸುಮಾರು 11-12 ಗಂಟೆ ಕೆಲಸ ಮಾಡುತ್ತಾರೆ. ಬಿಸಿಲಿಗೆ ಇಷ್ಟು ಹೊತ್ತು ಕಾರ್ಯ ನಿರ್ವಹಿಸುವುದು ಕಷ್ಟ. ಹೀಗಾಗಿ ಕೆಲವೊಮ್ಮೆ ಅಪಘಾತ ಸಂಭವಿಸುತ್ತದೆ. ಆದ್ದರಿಂದ ಎಸಿ ಕಡ್ಡಾಯಗೊಳಿಸುವುದರಿಂದ ಚಾಲಕರಿಗೆ ಅನುಕೂಲವಾಗಲಿದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಈಗಾಗಲೇ ವೋಲ್ವೋ, ಸ್ಕ್ಯಾನಿಯಾ ಕಂಪೆನಿಯ ಟ್ರಕ್ ಗಳಲ್ಲಿ ಎಸಿ ಅಳವಡಿಕೆಯಾಗಿದೆ. ಟಾಟಾ, ಅಶೋಕ್ ಲೈಲ್ಯಾಂಡ್ ಟ್ರಕ್ ಗಳಲ್ಲಿ ಎಸಿ ಅಳವಡಿಕೆ ಇನ್ನೂ ಬಾಕಿ ಇದೆ ಎಂದು ಸಚಿವರು ಹೇಳಿದರು.

ದೇಶದಲ್ಲಿ ಕೆಲವೊಮ್ಮೆ ಉಷ್ಣಾಂಶ 43ರಿಂದ 47 ಡಿಗ್ರಿ ಸೆಲ್ಸಿಯಸ್ ವರೆಗೂ ಇರುತ್ತದೆ. ಎಸಿ ಅಳವಡಿಸಿದರೆ ಚಾಲಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ 10ರಿಂದ 20 ಸಾವಿರ ರೂ. ಖರ್ಚು ಅಗುವ ಸಾಧ್ಯತೆ ಇದೆ. ಈಗಾಗಲೇ ಕಡತಕ್ಕೆ ಸಹಿ ಮಾಡಿದ್ದೇವೆ ಎಂದು ಗಡ್ಕರಿ ಹೇಳಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *