HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ – ಏನಿದು HSRP? ಅಳವಡಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ..

HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ – ಏನಿದು HSRP? ಅಳವಡಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ..

ನ್ಯೂಸ್‌ ಆ್ಯರೋ : ಈಗಾಗಲೇ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆ ಮಾಡಲು ಸಾರಿಗೆ ಇಲಾಖೆ ನವೆಂಬರ್ 17ರ ವರೆಗೆ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಂಡಳಿಯ ಸದಸ್ಯ ಡಾ.ಕಮಲ್ಜೀತ್ ಸೋಯಿ ಅವರು ಸುರಕ್ಷತೆಯ ದೃಷ್ಟಿಯಿಂದ ಇದನ್ನು ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ ಎಂದರು.

ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸುಮಾರು 34 ಕೋಟಿಗೂ ಹೆಚ್ವು ನಕಲಿ ನಂಬರ್ ಪ್ಲೇಟ್ ವಾಹನಗಳು ಓಡಾಡುತ್ತಿದೆ. ಇದರಿಂದ ದೇಶದಲ್ಲಿ ಶೇ.99 ಅಪಘಾತಗಳು ನಡೆಯುತ್ತಿದೆ. ದೇಶದಲ್ಲಿ ಒಟ್ಟು 18 ರಾಜ್ಯಗಳಲ್ಲಿ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು (Number Plate) ಅಳವಡಿಕೆ ಮಾಡಿಕೊಳ್ಳಲಾಗಿದೆ. ಉಳಿದ ರಾಜ್ಯಗಳು ಅಳವಡಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ.

ಅಧಿಕೃತವಾಗಿಲ್ಲದ ವಾಹನಗಳು ರಸ್ತೆಗಳಲ್ಲಿ ಓಡಾಡುವುದನ್ನು ಪತ್ತೆ ಹಚ್ಚಲು, ಅಪಘಾತವಾದ ವೇಳೆ ಹಿಟ್ ಆಂಡ್‌ ರನ್ ಕೇಸ್‌ನ್ನು ಭೇದಿಸಲು ಈ ನಂಬರ್ ಪ್ಲೇಟ್ ಸಹಾಯವಾಗಲಿದೆ ಎಂದರು.

ಮಾಧ್ಯಮಗಳು ಈ ಬಗ್ಗೆ ಪ್ರಚಾರ ನೀಡಬೇಕು:

ಮಾಧ್ಯಮಗಳು ಈ ನಂಬರ್ ಪ್ಲೇಟ್ ಬಗ್ಗೆ ಹೆಚ್ಚು ಪ್ರಚಾರ ಮಾಡುವ ಮೂಲಕ ಜನರಿಗೆ ಅರಿವು ಮೂಡಿಸಬೇಕು. ನಂಬರ್ ಪ್ಲೇಟ್ ಖರೀದಿಸಲು ₹400 ರನ್ನು ಕೇಂದ್ರ ಸರಕಾರವು ನಿಗದಿ ಮಾಡಿದೆ. https://www.siam.in/ ಜಾಲತಾಣದಲ್ಲಿ ನಂಬರ್ ಪ್ಲೇಟ್ ನೋಂದಣಿಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದರು.

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸುವಂತೆ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯವು 2001ರಲ್ಲೇ ಆದೇಶ ಹೊರಡಿಸಿತ್ತು. ಆದರೆ, ಆಗ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಿರಲಿಲ್ಲ. ದೇಶದ ಭದ್ರತೆ ದೃಷ್ಟಿಯಿಂದ 2018 ರಲ್ಲಿ ಹೊಸ ಆದೇಶ ಹೊರಡಿಸಿದ ಕೇಂದ್ರ ಸರಕಾರ 2019ರ ಎ.1ರ ನಂತರ ನೋಂದಣಿಯಾಗುವ ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಬೇಕೆಂದು ಸೂಚಿಸಿತ್ತು.

ಅಧಿಕೃತ ಡೀಲರ್ ಪಾಯಿಂಟ್‌ಗಳಲ್ಲಿ ನಂಬರ್ ಪ್ಲೇಟ್ ಅಳವಡಿಕೆಗೆ ಇಲಾಖೆ ಸೂಚನೆ:

ಎಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಜೋಡಣೆ ಪ್ರಕ್ರಿಯೆಯನ್ನು ವಾಹನ ಉತ್ಪಾದಕ ಕಂಪನಿಗಳ ಅಧಿಕೃತ ಡೀಲರ್​ಗಳಿಗೆ ಕೊಡಲಾಗಿದೆ. ರಾಜ್ಯದಲ್ಲಿ ನಂಬರ್ ಪ್ಲೇಟ್ ಪೂರೈಕೆ ಜವಾಬ್ದಾರಿಯನ್ನು ಏಳೆಂಟು ಕಂಪನಿಗಳಿಗೆ ಕೊಡಲಾಗಿದ್ದು, ರಾಜ್ಯಾದ್ಯಂತ ಅಂದಾಜು 4000ಕ್ಕೂ ಅಧಿಕ ಡೀಲರ್ ಪಾಯಿಂಟ್​ಗಳನ್ನು ಗುರುತಿಸಲಾಗಿದೆ. ಮುನ್ನೆಚ್ಚರಿಕ ಕ್ರಮವಾಗಿ ವಾಹನ ಮಾಲೀಕರು ಅಧಿಕೃತ ಡೀಲರ್ ಪಾಯಿಂಟ್​ಗಳಲ್ಲೇ ನಂಬರ್ ಪ್ಲೇಟ್​ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಸೂಚನೆ ನೀಡಿದೆ.

ನಂಬರ್ ಪ್ಲೇಟ್ ಹೆಸರಿನಲ್ಲಿ ಅಲ್ಲಲ್ಲಿ ವಂಚನೆ ಪ್ರಕರಣ ಬೆಳಕಿಗೆ

ನಂಬರ್‌ ಪ್ಲೇಟ್ ಅಳವಡಿಕೆ ಕಡ್ಡಾಯ ಆದೇಶ ಬೆನ್ನಲ್ಲೇ ಅಲ್ಲಲ್ಲಿ ವಾಹನ ಮಾಲೀಕರಿಗೆ ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಸಣ್ಣಪುಟ್ಟ ಅಂಗಡಿಗಳು, ಮೆಕಾನಿಕ್ ಶಾಪ್​ಗಳು, ಏಜೆನ್ಸಿಗಳು ಹಾಗೂ ಕೆಲವೊಂದು ಸಂಸ್ಥೆಗಳು, ಎಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುತ್ತೇವೆಂದು ನಕಲಿ ಪ್ಲೇಟ್​ಗಳಲ್ಲಿ ಹಾಲೋಗ್ರಾಂ ಸ್ಟಿಕ್ಕರ್​ಗಳನ್ನು ಅಳವಡಿಸಿ ಸವಾರರಿಂದ ಹಣ ದೋಚುತ್ತಿರುವುದು ಬೆಳಕಿಗೆ ಬಂದಿದೆ.

ಎಚ್ಚರ ತಪ್ಪಿದರೆ ಮತ್ತೆ ಪೊಲೀಸರಿಗೆ ದಂಡ ಕಟ್ಟಬೇಕಾಗುತ್ತದೆ..!

ಅಸಲಿ ಎಚ್​ಎಸ್​ಆರ್​ಪಿ ಫಲಕದ ಮೇಲೆ ಲೇಸರ್ ತಂತ್ರಜ್ಞಾನದಲ್ಲಿ ಅಕ್ಷರಗಳನ್ನು ಮುದ್ರಿಸಲಾಗಿರುತ್ತದೆ. ಪ್ರತಿಯೊಂದು ನಂಬರ್ ಪ್ಲೇಟ್​ಗೂ ಒಂದು ಸೀರಿಯಲ್ ನಂಬರ್ ಕೊಡಲಾಗುತ್ತದೆ. ಆ ನಂಬರ್ ಅನ್ನು ಸಾರಿಗೆ ಇಲಾಖೆಯ ವಾಹನ್-4 ತಂತ್ರಾಂಶಕ್ಕೆ ಜೋಡಣೆ ಮಾಡಲಾಗಿರುತ್ತದೆ. ಆದರೆ, ಅನಧಿಕೃತ ಸಂಸ್ಥೆಗಳು ಮತ್ತು ವ್ಯಕ್ತಿಗಳಿಂದ ಖರೀದಿಸುವ ನಂಬರ್ ಪ್ಲೇಟ್​ಗಳಲ್ಲಿ ಸೀರಿಯಲ್ ಸಂಖ್ಯೆಯೂ ಇರುವುದಿಲ್ಲ. ವಾಹನ್-4 ತಂತ್ರಾಂಶಕ್ಕೂ ಜೋಡಣೆ ಆಗಿರುವುದಿಲ್ಲ.

ಆದ್ದರಿಂದ ಇಂತಹ ಫಲಕಗಳನ್ನು ಅಳವಡಿಸಿದರೂ ಪೊಲೀಸರಿಗೆ ಸಿಕ್ಕಿಬಿದ್ದ ಬಳಿಕ ದಂಡ ಕಟ್ಟುವ ಜತೆಗೆ ಪುನಃ ಹಣ ಪಾವತಿಸಿ ಹೊಸದಾಗಿ ಎಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ತಿಳಿದುಕೊಂಡು ನಂಬರ್ ಪ್ಲೇಟ್ ಅಳವಡಿಕೆಗೆ ಮುಂದಾಗಿ.

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ನ ಇಲಾಖಾ ಮಾಹಿತಿ

  • ದ್ವಿಚಕ್ರ ವಾಹನ- ₹390-₹440
  • ನಾಲ್ಕು ಚಕ್ರ ವಾಹನ- ₹680- ₹690 (ಎರಡಕ್ಕೂ ಫಿಟ್​ವೆುಂಟ್, ಜಿಎಸ್​ಟಿ ಶುಲ್ಕ ಸೇರಿ)

ಅಸಲಿ ಎಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಹೇಗೆ ಗುರುತಿಸಬಹುದು?

ಪ್ರತಿ ವಾಹನದ ಎಚ್​ಎಸ್​ಆರ್​ಪಿ ಪ್ಲೇಟ್​ಗೂ ಪ್ರತ್ಯೇಕ ವಿಶಿಷ್ಟ ಗುರುತಿನ ಸಂಖ್ಯೆ
ಎಂಜಿನ್ ಸಂಖ್ಯೆ, ಚಾಸ್ಸಿ ಸಂಖ್ಯೆ, ರಿಜಿಸ್ಟ್ರೇಷನ್ ಸಂಖ್ಯೆ, ವಿಮೆ, ಮಾಲೀಕರ ಮಾಹಿತಿ ಅಡಕ
10 ಪಿನ್ ನಂಬರ್ ಒಳಗೊಂಡಿರುವ ವಿಶಿಷ್ಟ ಗುರುತಿನ ಸ್ಟಿಕ್ಕರ್ ಎಡಭಾಗದಲ್ಲಿ ಅಂಟಿಸಲಾಗುತ್ತದೆ.
ಅಶೋಕ ಚಕ್ರ ಚಿಹ್ನೆಯ ಕ್ರೋಮಿಯಂ ಸ್ಟಿಕ್ಕರ್ ಅಳವಡಿಸಲಾಗುತ್ತದೆ.

Related post

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-09-2023 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ಮೇಷಮಕ್ಕಳ ನಿಮ್ಮ ಸಂಜೆಯನ್ನು ಉಲ್ಲಾಸಮಯವಾಗಿಸುತ್ತಾರೆ. ಮಂಕು ಕವಿದ ಮತ್ತು ಒತ್ತಡದ ದಿನಕ್ಕೆ ಮಂಗಳ ಹಾಡಲು ಒಂದು ಸಂತೋಷಕೂಟವನ್ನು ಯೋಜಿಸಿ. ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ನೀವು ನಿಮ್ಮನ್ನು…
ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ – ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಕಾರವಾರದಲ್ಲಿ ಅರೆಸ್ಟ್…!!

ಸುಬ್ರಹ್ಮಣ್ಯ : ವಿವಾಹಿತ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಕಾಮಕೇಳಿ, ಫೋಟೋ…

ನ್ಯೂಸ್ ಆ್ಯರೋ : ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ…
ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ ಬಿದ್ದವನ ಕಥೆ ಮುಂದೇನಾಯ್ತು ಗೊತ್ತಾ?

ಗೂಗಲ್‌ನಲ್ಲಿ ಆತ್ಮಹತ್ಯೆಗೆ ದಾರಿ ಹುಡುಕಾಡಿದ ಯುವಕ – ಸೈಬರ್‌ ಪೊಲೀಸರ ಬಲೆಗೆ…

ನ್ಯೂಸ್‌ ಆ್ಯರೋ : ಈ ಆಧುನಿಕ ಯುಗದಲ್ಲಿ ಎಲ್ಲನೂ ತಂತ್ರಜ್ಞಾನದ ಮೂಲಕವೇ ನಡೆಯುತ್ತದೆ. ಇನ್ನೂ ಗೂಗಲ್ ಮುಖೇನಾ ನಮಗೆ ಬೇಕಾದ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವ ವಿಷಯದ ಬಗ್ಗೆನೂ…

Leave a Reply

Your email address will not be published. Required fields are marked *