ಒಮ್ಮೆ ಚಾರ್ಜ್ ಮಾಡಿದ್ರೆ 115 ಕಿ.ಮೀ. ಮೈಲೇಜ್ ನೀಡಲಿದೆ ಈ ಎಲೆಕ್ಟ್ರಿಕ್ ಸ್ಕೂಟರ್ – 90 ಕಿಮೀ ಟಾಪ್ ಸ್ಪೀಡ್ ಗೂ ಜಗ್ಗಲ್ಲ ಈ ಗಾಡಿ : ಎಥರ್ ಬಗ್ಗೆ ಇಲ್ಲಿದೆ ಮಾಹಿತಿ..

ಒಮ್ಮೆ ಚಾರ್ಜ್ ಮಾಡಿದ್ರೆ 115 ಕಿ.ಮೀ. ಮೈಲೇಜ್ ನೀಡಲಿದೆ ಈ ಎಲೆಕ್ಟ್ರಿಕ್ ಸ್ಕೂಟರ್ – 90 ಕಿಮೀ ಟಾಪ್ ಸ್ಪೀಡ್ ಗೂ ಜಗ್ಗಲ್ಲ ಈ ಗಾಡಿ : ಎಥರ್ ಬಗ್ಗೆ ಇಲ್ಲಿದೆ ಮಾಹಿತಿ..

ನ್ಯೂಸ್ ಆ್ಯರೋ‌ : ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ಜನಪ್ರಿಯತೆ ಹೊಂದಿರುವ ಎಥರ್ ಎನರ್ಜಿ ಕಂಪೆನಿಯು ಇದೀಗ ಬಜೆಟ್ ಬೆಲೆಯಲ್ಲಿ 450ಎಸ್(450S) ಇವಿ ಸ್ಕೂಟರ್ ಬಿಡುಗಡೆ ಮಾಡಲು ಮುಂದಾಗಿದೆ.

ಹೊಸ 450ಎಸ್ ಇವಿ ಸ್ಕೂಟರ್ ಬೆಲೆ 1,29,999 ರೂ. ಇದು ಇತ್ತೀಚೆಗೆ ಬಿಡುಗಡೆಯಾಗಿರುವ ಓಲಾ ಎಸ್1 ಏರ್ ಎಲೆಕ್ಟ್ರಿಕ್ ಸ್ಕೂಟರ್ ಗೆ ಉತ್ತಮ ಪೈಪೋಟಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರಲ್ಲಿ 3kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 115 ಕಿ.ಮೀ. ಮೈಲೇಜ್ ನೀಡುತ್ತದೆ. ಜೊತೆಗೆ ಪ್ರತಿ ಗಂಟೆಗೆ ಗರಿಷ್ಠ 90 ಕಿ.ಮೀ. ಟಾಪ್ ಸ್ಪೀಡ್ ಹೊಂದಿದೆ.

ಹೊಸ ಸ್ಕೂಟರ್ ನಲ್ಲಿ ಬೆಲೆ ಕಡಿತಕ್ಕಾಗಿ ಕೆಲವು ಪ್ರೀಮಿಯಂ ಫೀಚರ್ಸ್ ಗಳನ್ನು ಕೈ ಬಿಡಲಾಗಿದೆ. ಅದಾಗ್ಯೂ ಹಲವು ಸ್ಟ್ಯಾಂಡರ್ಡ್ ಫೀಚರ್ಸ್ ಗಳನ್ನು ಹೊಂದಿದೆ. ಇದು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತ್ಯುತ್ತಮ ರೈಡಿಂಗ್ ಅನುಭವ ನೀಡಲಿದೆ ಎಂದು ಕಂಪೆನಿ ಹೇಳಿದೆ.

ಬುಕ್ಕಿಂಗ್ ಯಾವಾಗ?

ಹೊಸ 450ಎಸ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗಾಗಿ ಎಥರ್ ಕಂಪನಿಯು ಜುಲೈ ಆರಂಭದಲ್ಲಿ ಬುಕ್ಕಿಂಗ್ ಪ್ರಾರಂಭಿಸುವ ನಿರೀಕ್ಷೆ ಇದೆ. ಸ್ಕೂಟರ್ ವಿತರಣೆಯು ಅಗಸ್ಟ್ ಮಧ್ಯಂತರ ಆರಂಭವಾಗಬಹುದಾಗಿದೆ. ಜೊತೆಗೆ ಎಥರ್ ಕಂಪನಿಯು ನಗರ ಪ್ರಯಾಣಕ್ಕೆ ಅನುಕೂಲಕವಾಗುವಂತೆ ಹೊಸ ಮಾದರಿಯನ್ನು ಬಿಡುಗಡೆ ಮಾಡಿದ್ದು, ಸಾಂಪ್ರದಾಯಿಕ 125 ಸಿಸಿ ಪೆಟ್ರೋಲ್ ಸ್ಕೂಟರ್‌ಗಳಿಗೆ ಹೋಲಿಸಿದರೆ ಇದು ಉತ್ತಮ ಕಾರ್ಯಕ್ಷಮತೆ ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *