ಭಾರತದಲ್ಲಿ‌ ಭಾರೀ ಬೇಡಿಕೆಯಲ್ಲಿದೆ‌ ಚೀನಾದ‌ ಆ ಎಲೆಕ್ಟ್ರಿಕ್‌ ಕಾರು: ಮೊದಲ ತಿಂಗಳಿನಲ್ಲೇ ದಾಖಲೆ ಪ್ರಮಾಣದ ಬುಕ್ಕಿಂಗ್

ಭಾರತದಲ್ಲಿ‌ ಭಾರೀ ಬೇಡಿಕೆಯಲ್ಲಿದೆ‌ ಚೀನಾದ‌ ಆ ಎಲೆಕ್ಟ್ರಿಕ್‌ ಕಾರು: ಮೊದಲ ತಿಂಗಳಿನಲ್ಲೇ ದಾಖಲೆ ಪ್ರಮಾಣದ ಬುಕ್ಕಿಂಗ್

ನ್ಯೂಸ್ ಆ್ಯರೋ : ಕಳೆದ ವರ್ಷ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ. ಸದ್ಯ ಇದರ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ₹33.99 ಲಕ್ಷವಾಗಿದೆ.ಈಗಾಗಲೇ ಇದರ ಬುಕ್ಕಿಂಗ್ ಆರಂಭಗೊಂಡಿದ್ದು, ಮೊದಲ‌ ತಿಂಗಳಿನಲ್ಲಿ 2 ಸಾವಿರ ಬುಕ್ಕಿಂಗ್‌ ಆಗಿದೆ.

ಚೀನಾದ ತಯಾರಕರು ಪ್ರತಿಕ್ರಿಯಿಸಿ,‌ ಕಾರಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ‌ ಬರುತ್ತಿದ್ದು, ಮಾರುಕಟ್ಟೆಯಲ್ಲಿ‌ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ ಎಂದರು.

ಬಿವೈಡಿ ಕಂಪನಿಯು ಈ ವರ್ಷದ ಜನವರಿಯಲ್ಲಿ 340 ಯೂನಿಟ್ ಅಟೊ 3 ಎಲೆಕ್ಟ್ರಿಕ್ ಎಸ್‌ಯುವಿಯನ್ನು ವಿತರಿಸಿದೆ ಎಂದು ಹೇಳಿತ್ತು.

ಬಿವೈಡಿ ಇಂಡಿಯಾದ ಎಲೆಕ್ಟ್ರಿಕ್ ಪ್ಯಾಸೆಂಜರ್ ವೆಹಿಕಲ್ಸ್‌ನ ಹಿರಿಯ ಉಪಾಧ್ಯಕ್ಷ ಸಂಜಯ್ ಗೋಪಾಲಕೃಷ್ಣನ್ ಮಾತನಾಡಿ, ಭಾರತದಲ್ಲಿ ಈ ಮೈಲಿಗಲ್ಲನ್ನು ಆಚರಿಸಲು ನಾವು ಸಂತೋಷಪಡುತ್ತೇವೆ. ಫೆಬ್ರವರಿಯ ಹೊತ್ತಿಗೆ, ನಾವು ಕೇವಲ ಎರಡು ತಿಂಗಳಲ್ಲಿ ಭಾರತದ ವಿವಿಧ ನಗರಗಳಲ್ಲಿ 700 ಯೂನಿಟ್‌ಗಳನ್ನು ವಿತರಿಸಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಬಿವೈಡಿ ಕಂಪನಿಯು ತನ್ನ ಆಟ್ಟೊ 3 ಎಲೆಕ್ಟ್ರಿಕ್ ಎಸ್‍ಯುವಿಯ 340 ಯುನಿಟ್‌ಗಳನ್ನು ದೇಶಾದ್ಯಂತ ತಮ್ಮ ಡೀಲರ್ ಮೂಲಕ ಗ್ರಾಹಕರಿಗೆ ವಿತರಿಸಲಾಗುತ್ತದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *