Viral Video : 3.28 ಕೋಟಿ ಬೆಲೆಯ ಫೆರಾರಿ 360 ಚಾಲೆಂಜ್ ಕಾರ್ ಢಿಕ್ಕಿ – ಅಪಘಾತದ ಭೀಕರ ದೃಶ್ಯದ ವಿಡಿಯೋ ವೈರಲ್…!!

Viral Video : 3.28 ಕೋಟಿ ಬೆಲೆಯ ಫೆರಾರಿ 360 ಚಾಲೆಂಜ್ ಕಾರ್ ಢಿಕ್ಕಿ – ಅಪಘಾತದ ಭೀಕರ ದೃಶ್ಯದ ವಿಡಿಯೋ ವೈರಲ್…!!

ನ್ಯೂಸ್ ಆ್ಯರೋ‌: ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆದ ಸರಣಿ ಅಪಘಾತಗಳ ದೃಶ್ಯ ವೈರಲ್ ಆಗಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಫೆರಾರಿ, ನಿಸ್ಸಾನ್ ಮತ್ತು ಸುಬಾರು ಇಂಪ್ರೆಜಾ ನಡುವಿನ ಅಪಘಾತದ ದೃಶ್ಯ ಭಯಾನಕವಾಗಿದ್ದು, ಬೆಚ್ಚಿ ಬೀಳಿಸುವಂತಿದೆ.

ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾದ ವೀಡಿಯೋದಲ್ಲಿ 3.28 ಕೋಟಿ ರೂ. ಬೆಲೆಯ ಫೆರಾರಿ 360 ಚಾಲೆಂಜ್ ಸ್ಟ್ರಾಡೇಲ್ ನಿಸ್ಸಾನ್ ಕಾರೊಂದಕ್ಕೆ ಡಿಕ್ಕಿಯಾಗಿ ಜಖಂಗೊಂಡಿದೆ. ಆ ಕಾರು ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮೊಲ್ಲರ್‌ನ ರಿಯರ್ ವ್ಯೂ ಡ್ಯಾಶ್‌ಕ್ಯಾಮ್‌ನಲ್ಲಿ ಈ ದೃಶ್ಯ ಸೆರೆಯಾಗಿದೆ.

ಎರಿಕ್ ಮೊಲ್ಲರ್ ಎಂಬಾತ ತನ್ನ ಕುಟುಂಬದೊಂದಿಗೆ ಮನೆಗೆ ತೆರಳುತ್ತಿದ್ದಾಗ ತನ್ನ ಹಿಂಬದಿಯ ಡ್ಯಾಶ್‌ಕ್ಯಾಮ್‌ನೊಂದಿಗೆ ವೀಡಿಯೋವನ್ನು ಸೆರೆ ಹಿಡಿದಿದ್ದಾನೆ. ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸುತ್ತಿದ್ದ ಫೆರಾರಿ ಮೊಲ್ಲರ್ ಅವರ ಹಿಂಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿಗೆ ಹೊಡೆದಿದೆ. ಈ ವೇಳೆ ಮತ್ತೊಂದು ಕಾರು ಕೂಡ ಅಪಘಾತಕ್ಕೀಡಾಗಿದೆ.

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *