ನಿರೀಕ್ಷೆಗೂ ಮೀರಿ ಹ್ಯುಂಡೈ ಎಲೆಕ್ಟ್ರಿಕ್ ಕಾರು ಬುಕ್ಕಿಂಗ್: ಏನಿದರೆ ವಿಶೇಷತೆ ಗೊತ್ತಾ?

ನಿರೀಕ್ಷೆಗೂ ಮೀರಿ ಹ್ಯುಂಡೈ ಎಲೆಕ್ಟ್ರಿಕ್ ಕಾರು ಬುಕ್ಕಿಂಗ್: ಏನಿದರೆ ವಿಶೇಷತೆ ಗೊತ್ತಾ?

ನ್ಯೂಸ್‌ಆ್ಯರೋ: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೇರಿದ ಹಾಗೇ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ. ಅದಲ್ಲದೆ ಪರಿಸರ ಸ್ನೇಹಿ ಆಗಿರುವುದರಿಂದ ಇದರಿಂದ ಲಾಭವೂ ಅಧಿಕವಾಗಿದೆ.

ಇದೀಗ ದಕ್ಷಿಣ ಕೊರಿಯಾದ ವಾಹನ ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಐಯೊನಿಕ್ 5 ಎಲೆಕ್ಟ್ರಿಕ್ ಕಾರನ್ನುಈಚೆಗೆ ಆಟೋ ಎಕ್ಸ್‌ಪೋದಲ್ಲಿ ಬಿಡುಗಡೆ ಮಾಡಿದೆ. ಈ ಹೊಸ ಹ್ಯುಂಡೈ ಐಯೊನಿಕ್ 5 ಎಲೆಕ್ಟ್ರಿಕ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ₹44.95 ಲಕ್ಷವಾಗಿದೆ.

ಹೊಸ ಹ್ಯುಂಡೈ ಐಯೊನಿಕ್ 5 ಎಲೆಕ್ಟ್ರಿಕ್ ಕಾರಿನ ಪರಿಚಯಾತ್ಮಕ ಬೆಲೆಯು ಮೊದಲ 500 ಬುಕಿಂಗ್‌ಗಳಿಗೆ ಮಾತ್ರ ಮೀಸಲಾಗಿತ್ತು. ಇದರ ಬೆಲೆ ₹60.95 ಲಕ್ಷದಿಂದ ₹65.95 ಲಕ್ಷದವರೆಗೆ ಇದೆ. Kia EV6 ಮಾದರಿಗೆ ಹೋಲಿಸಿದರೆ, Ioniq 5 ಸುಮಾರು ₹16 ಲಕ್ಷ ಹೆಚ್ಚು ಕೈಗೆಟುಕುವ ಬೆಲೆಯಲ್ಲಿದೆ. Kia EV6 ಎಲೆಕ್ಟ್ರಿಕ್ ಕಾರನ್ನು ಪೂರ್ಣ ಆಮದು ಯುನಿಟ್ ಆಗಿದ್ದರೆ, ಎರಡನೆಯದು CKD (ಸಂಪೂರ್ಣವಾಗಿ ನಾಕ್ ಡೌನ್) ಮಾರ್ಗದ ಮೂಲಕ ಇಲ್ಲಿಗೆ ಬರುತ್ತದೆ.

ಹ್ಯುಂಡೈ ಎಲೆಕ್ಟ್ರಿಕ್ ಕಾರಿಗೆ ನಿರೀಕ್ಷೆಗೂ ಮೀರಿ ಬುಕ್ಕಿಂಗ್

ಆನ್‌ಲೈನ್‌ನಲ್ಲಿ ಅಥವಾ ಆಯ್ದ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ತೆರಳಿ ಹ್ಯುಂಡೈ ಎಲೆಕ್ಟ್ರಿಕ್ ಕಾರನ್ನು ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಬುಕ್ಕಿಂಗ್ ಟೋಕನ್ ಮೊತ್ತ ₹1 ಲಕ್ಷವಾಗಿದೆ. ಹ್ಯುಂಡೈ ಕಂಪನಿಯು ಆರಂಭದಲ್ಲಿ ವಾರ್ಷಿಕ ಆಧಾರದ ಮೇಲೆ 250-300 ಯುನಿಟ್‌ಗಳನ್ನು ವಿತರಿಸಲು ಯೋಜಿಸಿದ್ದರೂ, ಅದರ ಈ ಮಾದರಿಗೆ ನಿರೀಕ್ಷೆಗೂ ಮೀರಿ ಬುಕ್ಕಿಂಗ್ ಆಗುತ್ತಿದೆ. ಈ ಐಯೊನಿಕ್ 5 ಎಲೆಕ್ಟ್ರಿಕ್ ಕಾರಿಗೆ ಇದುವರೆಗೆ 650 ಬುಕಿಂಗ್‌ಗಳನ್ನು ಪಡೆದುಕೊಂಡಿದೆ.

ಮಾರ್ಚ್‌ ಅಂತ್ಯದ ವೇಳೆಗೆ ಐಯೊನಿಕ್ 5 ಎಲೆಕ್ಟ್ರಿಕ್ ಕಾರಿನ ವಿತರಣೆಗಳು ಪ್ರಾರಂಭವಾಗುತ್ತದೆ. ಈ ಬಹುನಿರೀಕ್ಷಿತ ಹೊಸ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕ್ರಾಸ್ಒವರ್ ದಕ್ಷಿಣ ಕೊರಿಯಾದ ವಾಹನ ತಯಾರಕರ ಪ್ರಸಿದ್ಧ ಮತ್ತು ಸುಧಾರಿತ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಅನ್ನು ಒಳಗೊಂಡಿದೆ. ಈ ಹ್ಯುಂಡೈ ಎಲೆಕ್ಟ್ರಿಕ್ ಕ್ರಾಸ್ಒವರ್ ಈಚೆಗೆ ಬಿಡುಗಡೆಯಾದ ಕಿಯಾ ಇವಿ6 ಎಲೆಕ್ಟ್ರಿಕ್ ಕ್ರಾಸ್ಒವರ್ ವಾಹನಕ್ಕೆ ಬಹುತೇಕ ಹೋಲಲಿದೆ.

ಕಾರಿನ ವಿಶೇಷತೆ:

ಈ ಹೊಸ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರು 5 4,635 ಎಂಎಂ ಉದ್ದ, 1,890 ಅಗಲ ಮತ್ತು 1,625 ಎತ್ತರ ಮತ್ತು 3,000 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಈ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಮಾದರಿಯು ಆಗಿದ್ದು, ಹೊರಭಾಗದಲ್ಲಿ ಭವಿಷ್ಯದ ವಿನ್ಯಾಸವನ್ನು ಹೊಂದಿದೆ. ಇದು ಪಿಕ್ಸಲೇಟೆಡ್ LED ಟೈಲ್-ಲೈಟ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳೊಂದಿಗೆ ಡ್ಯುಯಲ್ LED ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ.

ಆಕರ್ಷಕ ಒಳಾಂಗಣದೊಂದಿಗೆ ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಡ್ಯುಯಲ್ ಫ್ಲೋಟಿಂಗ್ ಸ್ಕ್ರೀನ್ ಮತ್ತು 2-ಸ್ಪೋಕ್ ಸ್ಟೀರಿಂಗ್ ವೀಲ್‌ ಬರುತ್ತದೆ. 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನೀಡಲಾಗಿದೆ, ಈ ಹ್ಯುಂಡೈ ಕಾರಿನಲ್ಲಿ ಡ್ರೈವರ್ ಡಿಸ್‌ಪ್ಲೇಗಳು, 360 ಡಿಗ್ರಿ ಕ್ಯಾಮೆರಾ, ಪನೋರಮಿಕ್ ಸನ್‌ರೂಫ್, V2L (ವಾಹನ 2 ಲೋಡ್) ವೈಶಿಷ್ಟ್ಯಗಳೊಂದಿಗೆ ಸುಸಜ್ಜಿತವಾಗಿದೆ. ಈ ಹೊಸ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜನ್ಸಿ ಬ್ರೇಕಿಂಗ್ ಇದೆ.

ಇದರೊಂದಿಗೆ ಲೇನ್ ಕೀಪ್ ಮತ್ತು ಡಿಪಾರ್ಚರ್ ಏಡ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಮ್‌ನಂತಹ ಫೀಚರ್ಸ್ ಗಳೊಂದಿಗೆ ಅಡ್ವಾನ್ಸ್ಡ್ ಡ್ರೈವರ ಅಸಿಸ್ಟ್ ಸಿಸ್ಟಂನೊಂದಿಗೆ ಬರುತ್ತದೆ. ಈ ಹೊಸ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನ ಪವರ್‌ಟ್ರೇನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರಲ್ಲಿ 72.6kWh ಬ್ಯಾಟರಿ ಪ್ಯಾಕ್ ಅನ್ನು ಒಳಗೊಂಡಿದೆ, ಇದು ಸಿಂಗಲ್ ಚಾರ್ಜ್‌ನಲ್ಲಿ ARAI- ಪ್ರಕಾರ, 631 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

ಈ ಎಲೆಕ್ಟ್ರಿಕ್ ಮೋಟರ್ 217 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕ್ರಾಸ್ಒವರ್ RWD (ರೇರ್-ವ್ಹೀಲ್ ಡ್ರೈವ್) ಸಿಸ್ಟಂ ಅನ್ನು ಹೊಂದಿದೆ. ಈ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಕಾರು ಸೂಪರ್‌ಫಾಸ್ಟ್ 800V ಚಾರ್ಜಿಂಗ್ ಸೌಲಭ್ಯವಿದೆ. ಇದು 18 ನಿಮಿಷಗಳಲ್ಲಿ ಅದರ ಬ್ಯಾಟರಿ ಪ್ಯಾಕ್ ಅನ್ನು 10 ರಿಂದ 80 ಪ್ರತಿಶತದವರೆಗೆ ಜಾರ್ಚ್ ಮಾಡುತ್ತದೆ.

ಅನೇಕ ವಿಶೇಷತೆಗಳೊಂದಿಗೆ ಗ್ರಾಹಕರ ಅನುಕೂಲಕ್ಕೆ ತಕ್ಕ ಹಾಗೇ ಕಾರು ಸಿದ್ದಗೊಂಡಿದ್ದು, ಶೀಘ್ರದಲ್ಲೇ ಮಾರುಕಟ್ಟೆ ಸೇರಲಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *