ಮೊಬೈಲ್ ಚಾರ್ಜ್ ಆಗ್ಬೇಕಾದ್ರೆ ಬಿಸಿಯಾಗುತ್ತಾ…? – ಹೀಗಾದ್ರೆ ಡೋಂಟ್ ನೆಗ್ಲೆಕ್ಟ್ : ಹೀಗೆ ಮಾಡಿ…!!

ಮೊಬೈಲ್ ಚಾರ್ಜ್ ಆಗ್ಬೇಕಾದ್ರೆ ಬಿಸಿಯಾಗುತ್ತಾ…? – ಹೀಗಾದ್ರೆ ಡೋಂಟ್ ನೆಗ್ಲೆಕ್ಟ್ : ಹೀಗೆ ಮಾಡಿ…!!

ನ್ಯೂಸ್ ಆ್ಯರೋ : ನಾವು ಖರೀದಿಸುವ ಸ್ಮಾರ್ಟ್ ಫೋನ್ ಅದೆಷ್ಟೇ ಉತ್ತಮ ಗುಣಮಟ್ಟದಾಗಿದ್ದರೂ ಕೂಡಾ ಆಗಾಗ ಕೈ ಕೊಡುತ್ತಿರುತ್ತದೆ. ಅಷ್ಟೇ ಅಲ್ಲ ಚಾರ್ಜ್ ಗೆ ಇಟ್ಟರೆ ಸಾಕು. ಬಿಸಿಯಾಗುತ್ತದೆ. ಇದರಿಂದ ಅನೇಕ ಬಾರಿ ನಾವು ಸಮಸ್ಯೆಗಳನ್ನು ಕೂಡಾ ಎದುರಿಸುತ್ತಿರುತ್ತೇವೆ. ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ.

ಮಾರುಕಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನುಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ಸ್ ಹೊಂದಿರುವ ಮೊಬೈಲ್​ಗಳು ಭರ್ಜರಿ ಸೇಲ್ ಆಗುತ್ತಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್​ಫೋನ್ ಹೆಚ್ಚಿನ ರೇಡಿಯೇಷನ್ ಕೂಡ ಹೊಂದಿರುತ್ತವೆ.

ಕೆಲವೊಮ್ಮೆ ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗಿ ಬಿಡುತ್ತದೆ. ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗುವುದರಿಂದ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ. ಅಲ್ಲದೆ ಈಗ ಬ್ಯಾಟರಿ ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ ಸೌಲಭ್ಯವನ್ನು ಕೂಡ ನೀಡುತ್ತಿವೆ.

ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ.

  1. ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ.
  2. ಇಂದಿನ ದಿನದಲ್ಲಿ ಬಳಕೆದಾರರು ಮೊಬೈಲ್‌ಗಳು ಹಾಳಾಗದಿರಲಿ ಎಂದು ಫ್ಲಿಪ್ ಕವರ್ ಅನ್ನು ಅಳವಡಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಇದು ಫ್ಯಾಷನ್​​ಗಾಗಿಯೂ ಬಳಸುವವರಿದ್ದಾರೆ. ಹಾಗಾಗಿ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ರಕ್ಷಣಾ ಕವಚಗಳನ್ನು ತೆಗೆಯುವುದು ಉತ್ತಮ.
  3. ವೇಗವಾಗಿ ಮೊಬೈಲ್ ಚಾರ್ಜ್ ಆಗಬೇಕು ಎನ್ನುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ದೊರೆಯಲಿರುವ ವೇಗ ಚಾರ್ಜರ್‌ಗಳನ್ನು ಬಳಸಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಡಿ. ಇದರಿಂದ ಬ್ಯಾಟರಿ ಬೇಗ ಬಿಸಿಯಾಗಲಿದ್ದು, ಬ್ಯಾಟರಿ ಕ್ಷಮತೆ ಕೂಡ ಕಡಿಮೆಯಾಗುತ್ತದೆ.
  4. ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.
  5. ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

ಈ ಮೇಲಿನ ಎಲ್ಲಾ ಅಂಶಗಳು ಮೊಬೈಲ್ ಚಾರ್ಜ್ ಗಿಡುವಾಗ ಬಿಸಿಯೇರದಂತೆ ಮುನ್ನೆಚ್ಚರಿಕೆ ವಹಿಸುವ ಪೂರಕ ಅಂಶಗಳಾಗಿವೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *