ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ನ್ಯೂ ಜನರೇಷನ್‌ನ ಸ್ವಿಫ್ಟ್ – ಕಾರಿನ ಬೆಲೆ, ಫೀಚರ್ಸ್ ಬಗ್ಗೆ ಇಲ್ಲಿದೆ ಮಾಹಿತಿ..

ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ನ್ಯೂ ಜನರೇಷನ್‌ನ ಸ್ವಿಫ್ಟ್ – ಕಾರಿನ ಬೆಲೆ, ಫೀಚರ್ಸ್ ಬಗ್ಗೆ ಇಲ್ಲಿದೆ ಮಾಹಿತಿ..

ನ್ಯೂಸ್ ಆ್ಯರೋ : ಭಾರತದ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಕಾಣಸಿಗುವ ಕಾರೆಂದರೆ ಅದು ಮಾರುತಿ ಸ್ವಿಫ್ಟ್. ದೇಶಿಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವಿಪ್ಟ್‌ ತನ್ನ ಬ್ರ್ಯಾಂಡ್ ತೂಕವನ್ನು ಈಗಲೂ ಹಾಗೆಯೇ ಉಳಿಸಿಕೊಂಡಿದೆ. ಇನ್ನೂ ಕಳೆದ ಹಲವು ವರ್ಷದಿಂದ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಒಂದಾಗಿದೆ.

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ವಿಫ್ಟ್ ಕಾರು 2018ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು. ಈ ಜನಪ್ರಿಯ ಮತ್ತು ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಮಾರಾಟದಲ್ಲಿ ಪಾರುಪತ್ಯ ಸಾಧಿಸಿದೆ. ಮಾರುತಿ ಸುಜುಕಿ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿ ಮಾಸಿಕ ಪ್ರಯಾಣಿಕ ಕಾರು ಮಾರಾಟ ಪಟ್ಟಿಯಲ್ಲಿ ಪಾರುಪತ್ಯ ಹೊಂದಿದೆ.

ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ನ್ಯೂ ಜನರೇಷನ್‌ನ ಸ್ವಿಫ್ಟ್

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಮಾರಾಟದಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸಲು ಪ್ರಯತ್ನಿಸುತ್ತಿದೆ. ಮಾರುತಿ ಸುಜುಕಿ ಕಂಪನಿಯು ನ್ಯೂ ಜನರೇಷನ್ ಮಾರುತಿ ಸ್ವಿಫ್ಟ್ ಕಾರು ಬಿಡುಗಡೆಗೊಳಿಸಲಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ, ಸುಜುಕಿ ಮೋಟಾರ್ ಕಾರ್ಪೊರೇಷನ್ 2023ರ ಜಪಾನ್ ಮೊಬಿಲಿಟಿ ಶೋನಲ್ಲಿ 2024ರ ಸುಜುಕಿ ಸ್ವಿಫ್ಟ್ ಕಾನ್ಸೆಪ್ಟ್ ಜಾಗತಿಕವಾಗಿ ಪಾದಾರ್ಪಣೆ ಮಾಡಲಿದೆ ಎಂದು ವರದಿಗಳಾಗಿದೆ. ಅದಲ್ಲದೆ ಇದರ ಫೋಟೋ ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

“ಡ್ರೈವ್ ಆಂಡ್ ಫೀಲ್” ಕಾನ್ಸೆಪ್ಟ್ ಅನ್ನು ಇಟ್ಟುಕೊಂಡು ಹೊಸ ಕಾನ್ಸೆಪ್ಟ್ ಮಾದರಿಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಸುಜುಕಿ ಹೇಳಿಕೊಂಡಿದೆ. ಈ ಸುಜುಕಿ ಸ್ವಿಫ್ಟ್ ಕಾನ್ಸೆಪ್ಟ್ ಆಕರ್ಷಕ ವಿನ್ಯಾಸ ಮತ್ತು ಉತ್ತಮ ಡ್ರೈವ್ ಅನುಭವ ಒದಗಿಸುವುದಲ್ಲದೆ, ಕಾರು ಮತ್ತು ದೈನಂದಿನ ಜೀವನದಲ್ಲಿ ಆನಂದಿಸಿ ಎಂಬ ಹೊಸ ಮೌಲ್ಯವನ್ನು ಪ್ರಸ್ತಾಪಿಸುತ್ತದೆ ಎಂದು ಕಂಪನಿ ಹೇಳಿದೆ. ಒಟ್ಟಾರೆ ಸ್ಟೈಲಿಂಗ್ ಪ್ರಸ್ತುತ ಜನರೇಷನ್ ಸ್ವಿಫ್ಟ್ ಕಾರಿಗೆ ಹೋಲುತ್ತದೆ.

ವಿನ್ಯಾಸದಲ್ಲೂ ಕೆಲವು ಬದಲಾವಣೆ: ಹೊಸ ಲುಕ್‌ನಲ್ಲಿ ಮಾರುಕಟ್ಟೆ ಎಂಟ್ರಿಯಾಗಲು ಸುಜುಕಿ ಸ್ವಿಪ್ಟ್‌ನಲ್ಲಿ ವಿನ್ಯಾಸದಲ್ಲಿ ಬದಲಾವಣೆಯನ್ನು ತರಲಾಗಿದೆ. ಇದು ಗ್ರಿಲ್‌ನಲ್ಲಿ ಸ್ವಲ್ಪ ದೊಡ್ಡದಾದ ಹನಿಕೊಬ್ ಮಾದರಿಯೊಂದಿಗೆ ಬರುತ್ತದೆ ಮತ್ತು ಕೆತ್ತಿದ ಬಾನೆಟ್ ಅನ್ನು ಅದರ ಹೊಸ ಬಂಪರ್‌ನಲ್ಲಿ ಅಂದವಾಗಿ ವಿಲೀನಗೊಳಿಸಲಾಗಿದೆ. 2024ರ ಸುಜುಕಿ ಸ್ವಿಫ್ಟ್ ಹೊಸ ಜನರೇಷನ್ ಕ್ಲಾಮ್‌ಶೆಲ್ ಬಾನೆಟ್ ಅನ್ನು ಹೊಂದಿದೆ.

ಈ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಹೊಸ ಶೈಲಿಯ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಹೊಸ ಫಾಗ್ ಲ್ಯಾಂಪ್ ಹೌಸಿಂಗ್ ಅನ್ನು ಪಡೆಯುತ್ತದೆ. ಹೊರಹೋಗುವ ಮಾಡೆಲ್‌ಗೆ ಹೋಲಿಸಿದರೆ ಇದು ಹೆಚ್ಚು ಅಗ್ರೆಸಿವ್ ಆಗಿ ಮತ್ತು ವೈಶಿಷ್ಟ್ಯದಿಂದ ಲೋಡ್ ಮಾಡಲ್ಪಟ್ಟಿದೆ. ಈ ಕಾರಿನ ಸೈಡ್ ಪ್ರೊಫೈಲ್ ಹೊರಹೋಗುವ ಮಾದರಿಯೊಂದಿಗೆ ಹೋಲಿಕೆಯನ್ನು ಹೊಂದಿದೆ. ಇದು ಬ್ಲ್ಯಾಕ್ಡ್-ಔಟ್ ಪಿಲ್ಲರ್‌ಗಳು, ಬ್ಲ್ಯಾಕ್ಡ್-ಔಟ್ ORVM ಗಳೊಂದಿಗೆ ಸಂಯೋಜಿತ ಬ್ಲಿಂಕರ್‌ಗಳು ಮತ್ತು ಹೊಸ ಶೈಲಿಯ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿವೆ.

ಎಂಜಿನ್

ಮಾರುತಿ ಸುಜುಕಿಯು 2024ರ ಮೊದಲಾರ್ಧದಲ್ಲಿ ನ್ಯೂ ಜನರೇಷನ್ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಪರಿಚಯಿಸಲಿದೆ. ವರದಿಗಳ ಪ್ರಕಾರ, ಹೊಸ ಸ್ವಿಫ್ಟ್ ಸ್ಟ್ರಾಂಗ್ ಹೈಬ್ರಿಡ್ ಪವರ್‌ಟ್ರೇನ್‌ನೊಂದಿಗೆ ಅಳವಡಿಸಲ್ಪಡುತ್ತದೆ. ಇದು ಸ್ಟ್ರಾಂಗ್ ಹೈಬ್ರಿಡ್ ಪವರ್‌ಟ್ರೇನ್‌ನೊಂದಿಗೆ ಹೊಸ 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಪಡೆಯಬಹುದು. ಈ ಹ್ಯಾಚ್‌ಬ್ಯಾಕ್ 40 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ ಎಂದು ವರದಿಯಾಗಿದೆ.

ಫೀಚರ್ಸ್

ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಒಳಭಾಗವು ಹೊಸ ಬಲೆನೊ ಹ್ಯಾಚ್‌ಬ್ಯಾಕ್‌ನಿಂದ ಹೆಚ್ಚು ಸ್ಫೂರ್ತಿ ಪಡೆದಿದೆ. ಇದು ಡ್ಯುಯಲ್-ಟೋನ್ ಬ್ಲ್ಯಾಕ್ ಮತ್ತು ಬೂದು ಛಾಯೆಯೊಂದಿಗೆ ಬರುತ್ತದೆ. ಇನ್ನು ಈ ಕಾರಿನಲ್ಲಿ ಹೊಸ 9-ಇಂಚಿನ ಫ್ರೀ-ಸ್ಟ್ಯಾಂಡಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇಯನ್ನು ಇರಲಿದೆ.

ಈ ಕಾರಿನಲ್ಲಿ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್, ಮಲ್ಟಿ-ಫಂಕ್ಷನಲ್ ಸ್ಟೀರಿಂಗ್ ವೀಲ್, ಕ್ಲೈಮೇಟ್ ಕಂಟ್ರೋಲ್, HUD ಅಥವಾ ಹೆಡ್ಸ್-ಅಪ್ ಡಿಸ್‌ಪ್ಲೇ ಇತ್ಯಾದಿಗಳನ್ನು ಒಳಗೊಂಡಿದೆ. ಈ ಕಾನ್ಸೆಪ್ಟ್ ಡ್ಯುಯಲ್ ಸೆನ್ಸಾರ್ ಬ್ರೇಕ್ ಬೆಂಬಲ, ಅಡಾಪ್ಟಿವ್ ಹೈ ಬೀಮ್ ಅಸಿಸ್ಟ್, ಡ್ರೈವರ್ ಮಾನಿಟರಿಂಗ್ ಸಿಸ್ಟಮ್ ಮತ್ತು ಡಿಕ್ಕಿ ಮಿಟಿಗೇಶನ್ ಬ್ರೇಕಿಂಗ್ ಸಿಸ್ಟಮ್ ಸೇರಿದಂತೆ ಸುಧಾರಿತ ಸುರಕ್ಷತಾ ಫೀಚರ್ಸ್ ಗಳೂಂದಿಗೆ ಬರಲಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *