ಭಾರತದಲ್ಲಿ ಸ್ಥಾಪನೆಯಾಗಲಿದೆ ಟೆಸ್ಲಾ ಕಾರು ಉತ್ಪಾದನಾ ಘಟಕ – ಮೋದಿಯ ಮೇಕ್ ಇನ್ ಇಂಡಿಯಾ ಸಿಗಲಿದೆ ಬಲ

ಭಾರತದಲ್ಲಿ ಸ್ಥಾಪನೆಯಾಗಲಿದೆ ಟೆಸ್ಲಾ ಕಾರು ಉತ್ಪಾದನಾ ಘಟಕ – ಮೋದಿಯ ಮೇಕ್ ಇನ್ ಇಂಡಿಯಾ ಸಿಗಲಿದೆ ಬಲ

ನ್ಯೂಸ್ ಆ್ಯರೋ‌ : ವಿಶ್ವದ ಅತಿದೊಡ್ಡ ಶ್ರೀಮಂತ ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಸಂಸ್ಥೆ (Tesla) ತನ್ನ ವಿದ್ಯುತ್​ ಕಾರನ್ನು ಭಾರತದಲ್ಲಿ ಪರಿಚಯಿಸಲು ಮುಂದಾಗಿದೆ. ದೇಶೀಯ ಮಾರಾಟ ಮತ್ತು ರಫ್ತಿಗಾಗಿ ಎಲೆಕ್ಟ್ರಿಕ್ ಕಾರುಗಳನ್ನು ತಯಾರಿಸಲು ಭಾರತದಲ್ಲಿ ಘಟಕ ಸ್ಥಾಪಿಸಲು ಟೆಸ್ಲಾ ಇಂಕ್​ ಪ್ರಸ್ತಾವ ಸಲ್ಲಿಸಿದೆ ಎಂದು ಮೂಲಗಳು ಹೇಳಿವೆ.

ಮೊದಲ ಹಂತದಲ್ಲಿ ಟೆಸ್ಲಾ ಕಂಪೆನಿಯು ಇದಕ್ಕೆ ಸಂಬಂಧಿಸಿದ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ತೆರೆಯಲು ಯೋಜನೆ ರೂಪಿಸಿದೆ.

ಕಾರುಗಳ ಮೇಲಿನ ಆಮದು ತೆರಿಗೆಯನ್ನು ಕಡಿಮೆ ಮಾಡಲು ಕಳೆದ ವರ್ಷ ಟೆಸ್ಲಾ ವಿನಂತಿ ಮಾಡಿತ್ತು. ಆದರೆ ಭಾರತ ಅದನ್ನು ನಿರಾಕರಿಸಿತ್ತು. ಅದರ ಬೆನ್ನೆಲ್ಲೇ ಈ ಪ್ರಸ್ತಾವ ಬಂದಿದೆ ಎನ್ನಲಾಗುತ್ತಿದೆ. ಸದ್ಯ ಟೆಸ್ಲಾ ಭಾರತೀಯ ಅಧಿಕಾರಿಗಳೊಂದಿಗೆ ಕಡಿಮೆ ಆಮದು ತೆರಿಗೆಗಳ ಬಗ್ಗೆ ಚರ್ಚಿಸದಿದ್ದರೂ, ಸ್ಥಳ ಅಥವಾ ಹೂಡಿಕೆಯನ್ನು ನಿರ್ದಿಷ್ಟಪಡಿಸದೆ ಹೊಸ ತಯಾರಕಾ ಘಟಕ ಸ್ಥಾಪಿಸಲು ಪ್ರಸ್ತಾವಿಸಿದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ‘ಮೇಕ್ ಇನ್ ಇಂಡಿಯಾ’ ಅಭಿಯಾನದಡಿ ಸ್ಥಳೀಯವಾಗಿ ಕಾರು ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡುವುದು ಕೇಂದ್ರ ಸರ್ಕಾರದ ಆದೇಶ. ಟೆಸ್ಲಾದ ಕಾರ್ಯನಿರ್ವಾಹಕರು ಶೀಘ್ರ ಭಾರತಕ್ಕೆ ಭೇಟಿ ನೀಡಿ ಬಿಡಿಭಾಗಗಳ ಸ್ಥಳೀಯ ಸೋರ್ಸಿಂಗ್ ಮತ್ತು ಇತರ ವಿಷಯಗಳ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಲಿದ್ದಾರೆ ಎಂದು ವರದಿ ಹೇಳಿದೆ.

Related post

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 29-03-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ನೀವು…
ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…

Leave a Reply

Your email address will not be published. Required fields are marked *