ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ? ಇಂದೇ ನಿರ್ಧಾರವಾಗುತ್ತಾ?
ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ. ಮಧ್ಯಂತರ ಜಾಮೀನು ಪಡೆದ ಬಳಿಕ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಚಿಕಿತ್ಸೆಗಾಗಿ ಈಗಾಗಲೇ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿದ್ದಾರೆ ದರ್ಶನ್.
ಈಗಾಗಲೇ ದರ್ಶನ್ ಜಾಮೀನು ಅರ್ಜಿಗೆ ಎಸ್ಪಿಪಿ ಪ್ರಸನ್ನಕುಮಾರ್ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ದರ್ಶನ್ಗೆ ನೀಡುತ್ತಿರುವ ಚಿಕಿತ್ಸೆ ಕುರಿತು ವೈದ್ಯಕೀಯ ವರದಿ ಸಲ್ಲಿಸಲಾಗಿದೆ. ವೈದ್ಯರ ವರದಿ ಆಧಾರಿಸಿ ಎಸ್ಪಿಪಿ ಪ್ರತಿವಾದ ಮಂಡಿಸುವ ಸಾಧ್ಯತೆ ಇದೆ. ಚಿಕಿತ್ಸೆ ಹಾಗೂ ಆಪರೇಷನ್ ಸಂಬಂಧ ವೈದ್ಯರಿಂದ ವರದಿ ಸಲ್ಲಿಕೆಯಾಗಿದೆ. ದರ್ಶನ್ ಮೆಡಿಕಲ್ ರಿಪೋರ್ಟ್ ಆಧಾರದ ಮೇಲೆ ವಾದ ಮಾಡುವ ಸಾಧ್ಯತೆ ಇದೆ.
ಇಂದು ದರ್ಶನ್ ಸೇರಿ ಒಟ್ಟು 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಾಗೌಡ, ನಾಗರಾಜ್, ಅನುಕುಮಾರ್ ಲಕ್ಷ್ಮಣ ಹಾಗೂ ಜಗದೀಶ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಇಂದು ನಡೆಯಲಿದ್ದು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ನಟ ದರ್ಶನ್ ಪರ ಇಂದು ಹಿರಿಯ ವಕೀಲ ಸಿ.ವಿ.ನಾಗೇಶ್ ಹೈಕೋರ್ಟ್ಗೆ ಹಾಜರಾಗಲಿದ್ದಾರೆ. ಪೂರ್ಣ ಪ್ರಮಾಣದ ಜಾಮೀನಿಗಾಗಿ ದರ್ಶನ್ ಪರ ವಕೀಲರು ಪ್ರಯತ್ನ ನಡೆಸಲಿದ್ದಾರೆ.ಜಾಮೀನು ನೀಡದಂತೆ ತೀವ್ರ ಆಕ್ಷೇಪಣೆಗೆ ಮತ್ತೊಂದು ಕಡೆ ಎಸ್ಎಸ್ಪಿ ಪ್ರಸನ್ನಕುಮಾರ್ ಸಿದ್ಧತೆ ನಡೆಸಿದ್ದಾರೆ.
Leave a Comment